
ಕೊಪ್ಪಳ , 14 ಆಗಸ್ಟ್ (ಹಿ.ಸ.)
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಆಗಸ್ಟ್ 15 ರಿಂದ 16 ರವರೆಗೆ ಎರಡು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ಸಚಿವರು ಆಗಸ್ಟ್ 14ರ ಸಂಜೆ 4 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ನಿರ್ಗಮಿಸಿ, ರಾತ್ರಿ 9 ಗಂಟೆಗೆ ಹೊಸಪೇಟೆಗೆ ಆಗಮಿಸಿ, ವಾಸ್ತವ್ಯ ಹೂಡಲಿದ್ದಾರೆ. ಆ. 15ರಂದು ಬೆಳಿಗ್ಗೆ 7.30ಕ್ಕೆ ಹೊಸಪೇಟೆಯಿಂದ ನಿರ್ಗಮಿಸಿ, ಬೆಳಿಗ್ಗೆ 8.30ಕ್ಕೆ ಕೊಪ್ಪಳ ಜಿಲ್ಲೆಗೆ ಆಗಮಿಸಿ, ಪಕ್ಷದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬಳಿಕ ಬೆಳಿಗ್ಗೆ 10 ಗಂಟೆಗೆ ತೋಟಗಾರಿಕೆ ಜಂಟಿನಿರ್ದೇಶಕರ ಕಛೇರಿ ಆವರಣದಲ್ಲಿ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿರುವ 'ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ' ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ರಿಂದ 2 ಗಂಟೆಗೆಯವರೆಗೆ ಕಾರ್ಯಕ್ರಮ ಕಾಯ್ದಿರಿಸಿದೆ.
ನಂತರ ಅಂದು ಮಧ್ಯಾಹ್ನ 2 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ, ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಗೆಯವರೆಗೆ ಕನಕಗಿರಿ ವಿಧಾನಸಭಾ ಕ್ಷೇತ್ರದ ಬೊಮ್ಮಸಾಗರ ತಾಂಡಾ, ರಾಮದುರ್ಗ, ಚಿಕ್ಕಮಾದಿನಾಳ ಹಾಗೂ ಮುಸಲಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಕಾರಟಗಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳ ವಿಚಾರಣೆ ನಡೆಸಿ, ಬಳಿಕ ಅಂದು ಕಾರಟಗಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಆಗಸ್ಟ್ 16ರಂದು ಬೆಳಿಗ್ಗೆ 10.30ಕ್ಕೆ ಕಾರಟಗಿಯಿಂದ ನಿರ್ಗಮಿಸಿ, ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 3 ಕನಕಗಿರಿ ತಾಲೂಕಿನ ಹಿರೇಡಂಕನಕಲ್ಲು, ಕಲ್ಲೇರಿ, ಗೋಡಿನಾಳ, ಸಿರವಾರ, ಹುಲಿಹೈದರ ಮತ್ತು ಬೈಲಕುಂಪೂರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಂತರ ಸಚಿವರು ಅಂದು ಮಧ್ಯಾಹ್ನ 3 ಗಂಟೆಗೆ ಬೈಲಕುಂಪೂರದಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳಸುವರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್