ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಆರ್.ಅಶೋಕ ಆಗ್ರಹ
ಬೆಂಗಳೂರು, 14 ಆಗಸ್ಟ್ (ಹಿ.ಸ.): ಆ್ಯಂಕರ್: ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸ
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 14 ಆಗಸ್ಟ್ (ಹಿ.ಸ.):

ಆ್ಯಂಕರ್:

ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಹೋರಾಟಗಾರರು ಮನೆ, ಆಸ್ತಿ ಕಳೆದುಕೊಂಡು ಜೈಲು ಸೇರಿದ್ದರು. ಹಲವರು ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅಂತಹ ಪವಿತ್ರ ದಿನದಂದು ಸಚಿವರೊಬ್ಬರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಮಯವಿಲ್ಲ ಎಂದು ಹೇಳಿರುವುದು ದೇಶಕ್ಕೆ ಮಾಡಿದ ಅಗೌರವ ಎಂದು ಟೀಕಿಸಿದರು.

ಸಂವಿಧಾನದಡಿ ಪ್ರಮಾಣವಚನ ಸ್ವೀಕರಿಸಿರುವ ಸಚಿವರು ಸ್ವಾತಂತ್ರ್ಯೋತ್ಸವದಂತಹ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಜಮೀರ್‌ ಅಹ್ಮದ್‌ ಅವರ ನಡೆ ಸಂವಿಧಾನ ಮತ್ತು ದೇಶಕ್ಕೆ ತೋರಿದ ಅಗೌರವವಾಗಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧವೂ ಕಠಿಣ ಕ್ರಮ ಕೈಗೊಂಡಿಲ್ಲ. ಈಗ ಸಚಿವರೊಬ್ಬರು ರಾಷ್ಟ್ರೀಯ ಹಬ್ಬಕ್ಕೆ ಅಗೌರವ ತೋರಿದ್ದಾರೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಮತ್ತಷ್ಟು ಹೆಚ್ಚಾಗಲಿವೆ. ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆರ್‌.ಅಶೋಕ ಎಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande