ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಶ್ರೀನಿವಾಸ ಮಾನೆ ನೇಮಕ
ಬೆಂಗಳೂರು, 14 ಆಗಸ್ಟ್ (ಹಿ.ಸ.): ಆ್ಯಂಕರ್: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರನ್ನು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರು 2026ರ ಆಗಸ್ಟ್ 14ರಂದು
ಪತ್ರ


ಬೆಂಗಳೂರು, 14 ಆಗಸ್ಟ್ (ಹಿ.ಸ.):

ಆ್ಯಂಕರ್:

ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರನ್ನು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಅವರು 2026ರ ಆಗಸ್ಟ್ 14ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಶ್ರೀನಿವಾಸ ಮಾನೆ ಅವರನ್ನು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಗತ್ಯ ಆದೇಶ ಹೊರಡಿಸುವಂತೆ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande