ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ಗೌರವ: ಜಮಖಂಡಿ ತಾಲೂಕಿನ ಗಣಿ ಗ್ರಾಮದಲ್ಲಿ ಯುವ ಮೋರ್ಚಾ ಕಾರ್ಯಕ್ರಮ
ಬಾಗಲಕೋಟೆ, 14 ಆಗಸ್ಟ್ (ಹಿ.ಸ.) ಆ್ಯಂಕರ್ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುದಿನಗಳಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಸ್ಮರಿಸುತ್ತಾ, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರ ಕುಟುಂಬಗಳನ್ನು ಗೌರವಿಸುವ ಅರ್ಥಪೂರ್ಣ ಕಾರ್ಯಕ್ರಮವನ್ನು ಜಿಲ್ಲಾ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲ
ಸನ್ಮಾನ


ಬಾಗಲಕೋಟೆ, 14 ಆಗಸ್ಟ್ (ಹಿ.ಸ.)

ಆ್ಯಂಕರ್ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುದಿನಗಳಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಸ್ಮರಿಸುತ್ತಾ, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರ ಕುಟುಂಬಗಳನ್ನು ಗೌರವಿಸುವ ಅರ್ಥಪೂರ್ಣ ಕಾರ್ಯಕ್ರಮವನ್ನು ಜಿಲ್ಲಾ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿದ್ಯಾಧರ ಸವದಿ ಅವರ ನೇತೃತ್ವದಲ್ಲಿ ಜಮಖಂಡಿ ಮತಕ್ಷೇತ್ರದ ಗಣಿ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ತ್ಯಾಗಿಗಳ ಮನೆಗಳಿಗೆ ಭೇಟಿ ನೀಡಿ, ಅವರ ಕುಟುಂಬದ ಸದಸ್ಯರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸೇವೆ ಹಾಗೂ ತ್ಯಾಗವನ್ನು ಸ್ಮರಿಸಿ, ಅವರ ಕುಟುಂಬಸ್ಥರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮಂತಯ್ಯ ರಾಮಯ್ಯ ಮಠಪತಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ, ಅವರ ಕುಟುಂಬಗಳು ದೇಶಕ್ಕಾಗಿ ಸಲ್ಲಿಸಿದ ಸೇವೆಯನ್ನು ಗೌರವಿಸಲಾಯಿತು.

ಸ್ವಾತಂತ್ರ್ಯ ಎಂಬುದು ಅನೇಕ ಮಹನೀಯರ ತ್ಯಾಗ, ಹೋರಾಟ ಮತ್ತು ಬಲಿದಾನದ ಫಲವಾಗಿದ್ದು, ಇಂದಿನ ಪೀಳಿಗೆ ಅವರ ಆದರ್ಶಗಳನ್ನು ಅರಿತು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಹೋರಾಡಿದ ಮಹನೀಯರ ದೇಶಪ್ರೇಮ, ಧೈರ್ಯ ಮತ್ತು ತ್ಯಾಗಗಳು ಸದಾ ನಮಗೆಲ್ಲರಿಗೂ ಪ್ರೇರಣೆಯಾಗಿವೆ. ಅಂತಹ ದೇಶಭಕ್ತರ ಕುಟುಂಬಗಳನ್ನು ಗುರುತಿಸಿ ಗೌರವಿಸುವ ಅವಕಾಶ ದೊರೆತಿರುವುದು ಹೆಮ್ಮೆಯ ಸಂಗತಿ.

ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಜಮಖಂಡಿಯ ಯುವ ನಾಯಕ ವಿರೂಪಾಕ್ಷಯ್ಯ ಗುಡುಗುಂಟಿ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಠ್ಠಲ ಯತ್ನಟ್ಟಿ, ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳಾದ ಪವನ ಸಾಳುಂಕೆ, ಹನುಮಂತಗೌಡ ಪಾಟೀಲ, ಪ್ರಕಾಶ ಮಾನಶೆಟ್ಟಿ, ಪ್ರಜ್ವಲ್ ಮಾಳೆದ ಸೇರಿದಂತೆ ಪಕ್ಷದ ಹಿರಿಯರು, ಪ್ರಮುಖರು ಹಾಗೂ ಯುವ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಕ್ರಮವು ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande