



ಬಳ್ಳಾರಿ, 15 ಆಗಸ್ಟ್ (ಹಿ.ಸ.):
ಆ್ಯಂಕರ್ :ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ಅವರು, 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸುವುದರ ಜೊತೆಗೆ ಹೆಚ್.ಆರ್. ಗವಿಯಪ್ಪ ವೃತ್ತದಲ್ಲಿನ 150 ಅಡಿ ಎತ್ತರದ ಬೃಹತ್ ಧ್ವಜಾರೋಹಣ ನೆರವೇರಿಸಿದ್ದಾರೆ.
ನಂತರ, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮುಂಭಾಗದಲ್ಲಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೂ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ- ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್