ರನ್ನ ಕ್ರೀಡಾಂಗಣದಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಆಚರಣೆ
ಬಾಗಲಕೋಟೆ, 15 ಆಗಸ್ಟ್ (ಹಿ.ಸ.) ಆ್ಯಂಕರ್ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದಲ್ಲಿ ತಾಲೂಕು ದಂಡಾಧಿಕಾರಿ ಡಾ. ಚಿಕ್ಕಪ್ಪ ನಾಯಕ
ಧ್ವಜ


ಬಾಗಲಕೋಟೆ, 15 ಆಗಸ್ಟ್ (ಹಿ.ಸ.)

ಆ್ಯಂಕರ್ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಮಾರಂಭದಲ್ಲಿ ತಾಲೂಕು ದಂಡಾಧಿಕಾರಿ ಡಾ. ಚಿಕ್ಕಪ್ಪ ನಾಯಕ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರು ರಾಷ್ಟ್ರಗೀತೆಯೊಂದಿಗೆ ದೇಶಭಕ್ತಿಯ ಭಾವನೆ ವ್ಯಕ್ತಪಡಿಸಿದರು.

ಶಾಸಕರಾದ ಆರ್.ಬಿ. ತಿಮ್ಮಾಪುರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟವನ್ನು ಸ್ಮರಿಸಿದರು.

ಸ್ವಾತಂತ್ರ್ಯವನ್ನು ಪಡೆಯಲು ಅನೇಕ ಮಹನೀಯರು ತಮ್ಮ ಜೀವನವನ್ನೇ ದೇಶಕ್ಕಾಗಿ ಅರ್ಪಿಸಿದ್ದು, ಅವರ ತ್ಯಾಗದ ಫಲವಾಗಿ ಇಂದು ನಾವು ಸ್ವತಂತ್ರ ರಾಷ್ಟ್ರದಲ್ಲಿ ಬದುಕುತ್ತಿದ್ದೇವೆ ಎಂದು ಹೇಳಿದರು.

ಸ್ವಾತಂತ್ರ್ಯವು ಕೇವಲ ಹಕ್ಕುಗಳ ಅನುಭವವಲ್ಲ; ಅದರೊಂದಿಗೆ ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಜವಾಬ್ದಾರಿಯೂ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ದೇಶವನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯುವ ಸಂಕಲ್ಪವನ್ನು ಮಾಡಬೇಕು ಎಂದು ಕರೆ ನೀಡಲಾಯಿತು.

ಸಮಾರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಜನಪ್ರತಿನಿಧಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ದೇಶಭಕ್ತಿಯ ವಾತಾವರಣದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೇಶಭಕ್ತಿ ಸಾರುವ ಪ್ರದರ್ಶನಗಳು ನಡೆದಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದವು.

80ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ರನ್ನ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವು ದೇಶಭಕ್ತಿ, ಏಕತೆ ಮತ್ತು ರಾಷ್ಟ್ರಾಭಿಮಾನದ ಸಂದೇಶವನ್ನು ಸಾರುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande