
ಕೋಲಾರ, ೧೫ ಆಗಸ್ಟ್ (ಹಿ.ಸ.):
ಆ್ಯಂಕರ್ : ಜಿಲ್ಲಾ ಸಹಕಾರಿ ಒಕ್ಕೂಟದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರು ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದರು.
ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕ ಅಣ್ಣಿಹಳ್ಳಿ ನಾಗರಾಜ್ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಫಲವಾಗಿ ದೇಶ ಸ್ವಾತಂತ್ರ್ಯ ಪಡೆದಿದ್ದು, ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ ಎಸ್.ಆರ್ ಮುರಳಿಗೌಡ, ಕೆ.ಟಿ. ಬೈರೇಗೌಡ, ಕೆ.ಎಂ. ಮಂಜುನಾಥ್, ನಲ್ಲೂರು ಶಂಕರ್, ಮಾಲೂರು ಗೋವರ್ಧನ ರೆಡ್ಡಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಸಿಇಒ ಭಾರತಿ, ಮ್ಯಾನೇಜರ್ ಲಕ್ಷ್ಮೀ, ಸಿಬ್ಬಂದಿ ರವಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್