
ಕೋಲಾರ, ೧೫ ಆಗಸ್ಟ್ (ಹಿ.ಸ.):
ಆ್ಯಂಕರ್ : ಕೋಲಾರದ ಬಾಬಾ ವಿದ್ಯಾ ಸಂಸ್ಥೆಯಲ್ಲಿ ಎಂಬತ್ತನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಾಹಿತಿ ಟಿ. ಸುಬ್ಬರಾಮಯ್ಯ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ವಿದ್ಯಾರ್ಥಿಗಳು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಮೂಲಕ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಗೌಡ ಮಾತನಾಡಿ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.
ಮುಖ್ಯೋಪಾಧ್ಯಾಯರಾದ ವೇಣು ಸುಂದರ್ ಗೌಡ ಮಾತನಾಡಿ ಸ್ವಾತಂತ್ರ್ಯದ ಮಹತ್ವ, ರಾಷ್ಟ್ರೀಯ ಏಕತೆ ಹಾಗೂ ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್