ವಿಜಯಪುರ ನಗರದ ಸಮಗ್ರ ಅಭಿವೃದ್ಧಿಗೆ ನೂತನ ನಾಮನಿರ್ದೇಶಿತ ಸದಸ್ಯರ ನೇಮಕ
ವಿಜಯಪುರ, 15 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ನೂತನವಾಗಿ ಐವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ನಗರಾಭಿವೃ
ಅಭಿವೃದ್ಧಿ


ವಿಜಯಪುರ, 15 ಆಗಸ್ಟ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ನೂತನವಾಗಿ ಐವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ತಿಳಿಸಿದರು.

ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರಾಗಿ ರಮೇಶ್ ಶ್ರೀಶೈಲ ಆಳೂರ, ಅಬ್ದುಲ್ ಖಾದರ್ ಖಾದಿಮ್, ರಮೇಶ್ ಬಾಬು ಲಮಾಣಿ, ಶ್ರೀಮತಿ ಜಯಶ್ರೀ ಹರಿಶ್ಚಂದ್ರ ಭಾರತೆ ಹಾಗೂ ಆನಂದ ದುಂಡಪ್ಪ ಕುಸೂರು ಅವರನ್ನು ನೇಮಕ ಮಾಡಲಾಗಿದೆ.

ನೂತನ ಸದಸ್ಯರ ನೇಮಕದಿಂದ ವಿಜಯಪುರ ನಗರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಡಾ. ಗಂಗಾಧರ ಸಂಬಣ್ಣಿ ವ್ಯಕ್ತಪಡಿಸಿದರು. ನಗರದ ಬೆಳವಣಿಗೆಗೆ ಅನುಗುಣವಾಗಿ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವುದು ಹಾಗೂ ನಾಗರಿಕ ಸೌಲಭ್ಯಗಳನ್ನು ಸುಧಾರಿಸುವುದು ಪ್ರಾಧಿಕಾರದ ಪ್ರಮುಖ ಆದ್ಯತೆಯಾಗಲಿದೆ ಎಂದು ಹೇಳಿದರು.

ವಿಜಯಪುರ ನಗರದ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಸ್ವಚ್ಛತೆ, ಬೀದಿ ದೀಪಗಳ ಅಳವಡಿಕೆ ಮತ್ತು ನಿರ್ವಹಣೆ, ಉದ್ಯಾನವನಗಳ ಅಭಿವೃದ್ಧಿ, ಸಂಚಾರ ವ್ಯವಸ್ಥೆಯ ಸುಧಾರಣೆ ಸೇರಿದಂತೆ ವಿವಿಧ ನಾಗರಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ನಗರದ ವಿವಿಧ ಬಡಾವಣೆಗಳು ಹಾಗೂ ವಿಸ್ತರಣಾ ಪ್ರದೇಶಗಳಲ್ಲಿನ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ ಹಂತ ಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಸದಸ್ಯರು ತಿಳಿಸಿದರು.

ನಗರದ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಮಹತ್ವದ್ದಾಗಿದ್ದು, ಜನರ ಅಗತ್ಯಗಳು ಹಾಗೂ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ವಿಜಯಪುರ ನಗರವನ್ನು ಸ್ವಚ್ಛ, ಸುಂದರ ಹಾಗೂ ಸುಸಜ್ಜಿತ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದೊಂದಿಗೆ ನೂತನ ಸದಸ್ಯರು ಸಮನ್ವಯದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಲಾಯಿತು.

ಇಂದು ನಡೆದ ನೂತನ ನಾಮನಿರ್ದೇಶಿತ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಸಹಾಯಕ ಅಭಿಯಂತರ ಶಂಭುಲಿಂಗ ಹೇರಲಗಿ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವಸಂತ ಹೊನಮೋಡೆ, ಸೋಮನಾಥ ಕಳ್ಳಿಮನಿ, ವಿದ್ಯಾರಾಣಿ ತುಂಗಳ, ವಿನೋದ್ ವ್ಯಾಸ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದು, ನೂತನ ಸದಸ್ಯರಿಗೆ ಶುಭ ಹಾರೈಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande