ಇಂಧನ ಭದ್ರತೆಗೆ ಆದ್ಯತೆ: 2047ರ ವೇಳೆಗೆ 100 ಗಿಗಾವ್ಯಾಟ್ ಇಂಧನ ಸಾಮರ್ಥ್ಯದ ಗುರಿ;ಪ್ರಧಾನಿ ಮೋದಿ
ನವದೆಹಲಿ, 15 ಆಗಸ್ಟ್ (ಹಿ.ಸ.): ಆ್ಯಂಕರ್: ದೇಶದ ಅಭಿವೃದ್ಧಿಯಲ್ಲಿ ಇಂಧನದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂಧನ ಭದ್ರತೆ ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಪ್ರಾಚೀರದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಅ
नई दिल्ली में शनिवार को  प्रधानमंत्री नरेन्द्र मोदी ने स्वतंत्रता दिवस के मौके पर लाल किले पर 13वीं बार तिरंगा फहराया। फोटो -  इंटरनेट मीडिया


ನವದೆಹಲಿ, 15 ಆಗಸ್ಟ್ (ಹಿ.ಸ.):

ಆ್ಯಂಕರ್:

ದೇಶದ ಅಭಿವೃದ್ಧಿಯಲ್ಲಿ ಇಂಧನದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂಧನ ಭದ್ರತೆ ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಪ್ರಾಚೀರದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತವು 2047ರ ವೇಳೆಗೆ 100 ಗಿಗಾವ್ಯಾಟ್ ಇಂಧನ ಸಾಮರ್ಥ್ಯದ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಶಾಂತಿ ಕಾಯ್ದೆ ಅಂಗೀಕರಿಸಿ ಮಹತ್ವದ ಹೆಜ್ಜೆ ಇಡಲಾಗಿದೆ ಎಂದರು.

‘ಮೇಕ್ ಇನ್ ಇಂಡಿಯಾ’, ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ‘ವೋಕಲ್ ಫಾರ್ ಲೋಕಲ್’ ಅಭಿಯಾನಗಳೊಂದಿಗೆ ದೇಶದ ಜನರ ಮನಸ್ಸು ಬೆಸೆದುಕೊಂಡಿದೆ. ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರತೆಯತ್ತ ವೇಗವಾಗಿ ಸಾಗುತ್ತಿದೆ. ದೇಶದಲ್ಲಿ ಮೂರು ಸೆಮಿಕಂಡಕ್ಟರ್ ಘಟಕಗಳು ಕಾರ್ಯಾರಂಭಿಸಿದ್ದು, ಅಲ್ಲಿಂದ ರಫ್ತು ಕೂಡ ಆರಂಭವಾಗಿದೆ ಎಂದು ತಿಳಿಸಿದರು.

ಕಳೆದ 12 ವರ್ಷಗಳಲ್ಲಿ ರಕ್ಷಣಾ ಉತ್ಪಾದನೆ ನಾಲ್ಕು ಪಟ್ಟು, ಖಾದಿ ಮತ್ತು ಗ್ರಾಮೋದ್ಯೋಗ ಐದು ಪಟ್ಟು ಹಾಗೂ ಎಲೆಕ್ಟ್ರಾನಿಕ್ ಉತ್ಪಾದನೆ ಏಳು ಪಟ್ಟು ಹೆಚ್ಚಾಗಿದೆ. ರೈಲ್ವೆ ಕೋಚ್‌ಗಳ ಉತ್ಪಾದನೆ 21 ಪಟ್ಟು ಮತ್ತು ಮೊಬೈಲ್ ಫೋನ್ ಉತ್ಪಾದನೆ 33 ಪಟ್ಟು ಹೆಚ್ಚಾಗಿದೆ. ಇಂಟರ್‌ನೆಟ್ ಬಳಕೆದಾರರ ಸಂಖ್ಯೆ ನಾಲ್ಕು ಪಟ್ಟು ಹಾಗೂ ಡಿಜಿಟಲ್ ವಹಿವಾಟು 100 ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ವಿವರಿಸಿದರು.

2047ರಲ್ಲಿ ಸ್ವಾತಂತ್ರ್ಯದ 100 ವರ್ಷ ಪೂರ್ಣಗೊಳ್ಳುವ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ನಮ್ಮ ದೃಢ ಸಂಕಲ್ಪವಾಗಿದೆ. ದೇಶ ಇನ್ನು ಸಣ್ಣ ಕನಸುಗಳೊಂದಿಗೆ ಮುನ್ನಡೆಯುವುದಿಲ್ಲ. ದೊಡ್ಡ ಕನಸುಗಳು ನಮ್ಮ ಚಿಂತನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತವೆ. ದೃಢ ಸಂಕಲ್ಪ ಮತ್ತು ಸಾಮರ್ಥ್ಯದೊಂದಿಗೆ ಭಾರತ ತನ್ನ ಗುರಿಗಳನ್ನು ಸಾಧಿಸಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande