ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ, 15 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 80ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಕೆಂಪುಕೋಟೆಗೆ ತೆರಳುವ ಮುನ್ನ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಶುಭಾಶಯ ಸಂದೇಶ ಪ್ರಕಟಿಸಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ಹೋರಾ
प्रधानमंत्री नरेन्द्र मोदी। फोटो -  इंटरनेट मीडिया


ನವದೆಹಲಿ, 15 ಆಗಸ್ಟ್ (ಹಿ.ಸ.):

ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 80ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಕೆಂಪುಕೋಟೆಗೆ ತೆರಳುವ ಮುನ್ನ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಶುಭಾಶಯ ಸಂದೇಶ ಪ್ರಕಟಿಸಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ಹೋರಾಟ ಮತ್ತು ದೇಶದ ಮೇಲಿನ ಅಪಾರ ಸಮರ್ಪಣೆಯನ್ನು ಸ್ಮರಿಸಿದರು.

ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸಲು ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ಕರೆ ನೀಡಿದರು.

ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಸಮರ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ಆಗಮಿಸಿದ್ದು, ಕೆಂಪುಕೋಟೆಯ ಪ್ರಾಚೀರದಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.

ಈ ಬಾರಿಯ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಗೀತೆಗೆ ಮೊದಲು ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗಾಯನ ನಡೆಯಿತು.. ಸಮಾರಂಭಕ್ಕಾಗಿ ಕೆಂಪುಕೋಟೆಯನ್ನು ತ್ರಿವರ್ಣ ಧ್ವಜದ ಬಣ್ಣಗಳ ಹೂವುಗಳಿಂದ ಅಲಂಕರಿಸಲಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande