2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುತ್ತೇವೆ: ಪ್ರಧಾನಿ ಮೋದಿ
ನವದೆಹಲಿ, 15 ಆಗಸ್ಟ್ (ಹಿ.ಸ.): ಆ್ಯಂಕರ್:2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ಕೆಂಪುಕೋಟೆಯ ಪ್ರಾಚೀರದಿಂದ ದೇಶವನ್ನುದ್ದೇಶಿಸಿ ಮಾತನಾಡಿದ
80वें स्वतंत्रता दिवस के अवसर देशवासियों को संबोाधित करते प्रधानमंत्री


ನವದೆಹಲಿ, 15 ಆಗಸ್ಟ್ (ಹಿ.ಸ.):

ಆ್ಯಂಕರ್:2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ಕೆಂಪುಕೋಟೆಯ ಪ್ರಾಚೀರದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೇಶ ಇನ್ನು ಸಣ್ಣ ಕನಸುಗಳೊಂದಿಗೆ ಮುನ್ನಡೆಯುವಂತಿಲ್ಲ. ದೊಡ್ಡ ಕನಸುಗಳನ್ನು ಕಾಣಬೇಕು, ಉನ್ನತ ಸಂಕಲ್ಪಗಳೊಂದಿಗೆ ಮುನ್ನಡೆಯಬೇಕು. ದೊಡ್ಡ ಕನಸುಗಳು ನಮ್ಮ ಚಿಂತನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತವೆ ಎಂದರು.

ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಲವರು ದೇಶವನ್ನು ಹೆದರಿಸಲು ಪ್ರಯತ್ನಿಸಿದರು. ಆದರೆ ಕಳೆದ 10–12 ವರ್ಷಗಳಲ್ಲಿ ರೂಪಿಸಿದ ದೂರದೃಷ್ಟಿಯ ಯೋಜನೆಗಳು ಸಂಕಷ್ಟದ ಸಮಯದಲ್ಲಿ ದೇಶದ ನೆರವಿಗೆ ಬಂದಿವೆ. ಇಂದು ಭಾರತ ತನ್ನ ಶಕ್ತಿಯ ಮೇಲೆ ನಿಂತು ಮುನ್ನಡೆಯುತ್ತಿದೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಯೂರಿಯಾ ಲಭ್ಯವಿದೆ ಎಂದು ಹೇಳಿದರು.

ಜಾಗತೀಕರಣದ ಸ್ವರೂಪ ಬದಲಾಗುತ್ತಿದ್ದು, ರಾಷ್ಟ್ರಗಳು ತಮ್ಮಲ್ಲಿರುವ ಸಂಪನ್ಮೂಲಗಳನ್ನು ತಮ್ಮ ಹಿತಕ್ಕಾಗಿ ಬಳಸಿಕೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಆತ್ಮನಿರ್ಭರತೆಯ ಅಗತ್ಯ ಮತ್ತಷ್ಟು ಹೆಚ್ಚಾಗಿದೆ. ಭಾರತ ಆತ್ಮನಿರ್ಭರತೆಯ ಸಿದ್ಧತೆ ಮಾಡಿಕೊಂಡಿರದಿದ್ದರೆ ಇಂದಿನ ಸವಾಲುಗಳನ್ನು ಎದುರಿಸುವುದು ಕಷ್ಟವಾಗುತ್ತಿತ್ತು ಎಂದರು.

ಕಳೆದ 12 ವರ್ಷಗಳಲ್ಲಿ ದೇಶದ ಜನರ ನಿರಂತರ ಪ್ರಯತ್ನದಿಂದ ಭಾರತ ‘ಫ್ರೇಜೈಲ್ ಫೈವ್’ ಆರ್ಥಿಕತೆಗಳಿಂದ ಹೊರಬಂದು ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳ ಸಾಲಿಗೆ ಸೇರಿದೆ. ಭಾರತದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡುತ್ತಿದ್ದಾರೆ. ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾದಾಗ, ಜಗತ್ತು ಭಾರತವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವುದು ಅನಿವಾರ್ಯವಾಗಲಿದೆ ಎಂದು ಪ್ರಧಾನಿ ಹೇಳಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಮಹಾತ್ಮ ಗಾಂಧೀಜಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದರು. ‘ಪ್ರತಿ ಹೃದಯದಲ್ಲೂ ವಂದೇ ಮಾತರಂ ಮೊಳಗುತ್ತಿದೆ, ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡುತ್ತಿದೆ’ ಎಂದು ಅವರು ಹೇಳಿದರು. ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಮೊದಲು ಕೆಂಪುಕೋಟೆಯಲ್ಲಿ ಗೌರವ ರಕ್ಷಕ ಪಡೆಯಿಂದ ಗೌರವ ವಂದನೆ ಸ್ವೀಕರಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande