
ಬಾಗಲಕೋಟೆ, 15 ಆಗಸ್ಟ್ (ಹಿ.ಸ.)
ಆ್ಯಂಕರ್ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಆ.14ರ ಮಧ್ಯರಾತ್ರಿ
ಬಾಗಲಕೋಟೆ ಜಿಲ್ಲೆಯ ಮುಧೋಳ
ನಗರದ ಪ್ರಮುಖ ರಸ್ತೆಗಳಲ್ಲಿ ಭವ್ಯ ಪಂಜಿನ ಮೆರವಣಿಗೆ ನಡೆಯಿತು.
ನಗರದ ಗಾಂಧಿ ವೃತ್ತದಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಪ್ರಮುಖ ರಸ್ತೆ ಹಾಗೂ ವೃತ್ತಗಳ ಮೂಲಕ ಸಂಚರಿಸಿ ಗಮನ ಸೆಳೆಯಿತು. ಕೈಯಲ್ಲಿ ಪಂಜುಗಳನ್ನು ಹಿಡಿದು ದೇಶಭಕ್ತಿ ಘೋಷಣೆಗಳನ್ನು ಮೊಳಗಿಸುತ್ತ ಸಾಗಿದ ಕಾರ್ಯಕರ್ತರು ಹಾಗೂ ಯುವಕರು ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿದರು.
ಮೆರವಣಿಗೆಯುದ್ದಕ್ಕೂ ದೇಶಭಕ್ತಿ ಗೀತೆಗಳು ಹಾಗೂ ಘೋಷಣೆಗಳು ಮೊಳಗಿದವು. ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಮೆರವಣಿಗೆಯನ್ನು ವೀಕ್ಷಿಸಿ ದೇಶಭಕ್ತಿಯ ಭಾವನೆ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವ ಮೂಲಕ ಕಾರ್ಯಕ್ರಮಕ್ಕೆ ಅರ್ಥಪೂರ್ಣತೆ ನೀಡಲಾಯಿತು.
ಗಾಂಧಿ ವೃತ್ತದಿಂದ ಹೊರಟ ಮೆರವಣಿಗೆ ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಸಂಚರಿಸಿ ಪುನಃ ಗಾಂಧಿ ವೃತ್ತದ ಮೂಲ ಸ್ಥಾನವನ್ನು ತಲುಪಿತು. ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು ಹಾಗೂ ದೇಶಾಭಿಮಾನಿಗಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಸ್ವಾತಂತ್ರ್ಯೋತ್ಸವದ ಮುನ್ನಾದಿನ ನಡೆದ ಪಂಜಿನ ಮೆರವಣಿಗೆಯಿಂದ ನಗರದಾದ್ಯಂತ ದೇಶಭಕ್ತಿಯ ವಾತಾವರಣ ನಿರ್ಮಾಣವಾಗಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande