
ಬೆಂಗಳೂರು, 16 ಆಗಸ್ಟ್ (ಹಿ.ಸ.):
ಆ್ಯಂಕರ್:
'ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, 'ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಪತ್ರ ಬರೆದಿರುವುದು ನಿಜ. ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ' ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.