
ನವದೆಹಲಿ, 16 ಆಗಸ್ಟ್ (ಹಿ.ಸ.):
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಅವರು ‘ದಿಮಾಗೀ ನಕ್ಸಲ್’ ಎಂಬ ಪದವನ್ನು ಪ್ರತಿಪಕ್ಷದ ನಾಯಕರನ್ನು ಉದ್ದೇಶಿಸಿ ಬಳಸಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, ಮಾವೋವಾದವನ್ನು ಬೆಂಬಲಿಸುವವರು, ಭಾರತೀಯ ಸಂವಿಧಾನವನ್ನು ತಿರಸ್ಕರಿಸುವವರು, ಪ್ರತ್ಯೇಕತಾವಾದಿಗಳ ಪರ ನಿಲ್ಲುವವರು ಹಾಗೂ ದೇಶವನ್ನು ಒಡೆಯುವ ಸಿದ್ಧಾಂತ ಹೊಂದಿರುವವರನ್ನು ಪ್ರಧಾನಿ ‘ದಿಮಾಗೀ ನಕ್ಸಲ್’ ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈಶಾನ್ಯ ಭಾರತವನ್ನು ದೇಶದ ಉಳಿದ ಭಾಗಗಳಿಂದ ಪ್ರತ್ಯೇಕಿಸುವ ಪ್ರಯತ್ನ ನಡೆಸುವವರಿಗೂ ಈ ಪದ ಅನ್ವಯಿಸುತ್ತದೆ ಎಂದು ರಿಜಿಜು ಹೇಳಿದ್ದಾರೆ. ಈ ಸಂಬಂಧ ಶರ್ಜೀಲ್ ಇಮಾಮ್ ಅವರ ಹಳೆಯ ಹೇಳಿಕೆಯನ್ನೂ ಅವರು ಉಲ್ಲೇಖಿಸಿದ್ದಾರೆ.
ಸ್ವಾತಂತ್ರ್ಯೋತ್ಸವದಂದು ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಮಾಡಿದ ‘ದಿಮಾಗೀ ನಕ್ಸಲ್’ ಹೇಳಿಕೆಯ ಬಳಿಕ, ಅದು ಸರ್ಕಾರದ ನೀತಿಗಳನ್ನು ವಿರೋಧಿಸುವ ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಈ ಆರೋಪವನ್ನು ರಿಜಿಜು ತಳ್ಳಿಹಾಕಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.