ಮಹಾಬಳೇಶ್ವರ ಕಾಲೋನಿಯಲ್ಲಿ ಗಾರ್ಡನ್ ಅಭಿವೃದ್ಧಿಗೆ ಸ್ಥಳ ಪರಿಶೀಲನೆ
ವಿಜಯಪುರ, 16 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ದರ್ಗಾ ರಸ್ತೆಗೆ ಹೊಂದಿಕೊಂಡಿರುವ ಮಹಾಬಳೇಶ್ವರ ಕಾಲೋನಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಗಾರ್ಡನ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಅವರು ಅಧಿಕಾರಿ
ಭೇಟಿ


ವಿಜಯಪುರ, 16 ಆಗಸ್ಟ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ದರ್ಗಾ ರಸ್ತೆಗೆ ಹೊಂದಿಕೊಂಡಿರುವ ಮಹಾಬಳೇಶ್ವರ ಕಾಲೋನಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಗಾರ್ಡನ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು.

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಅವರು ಅಧಿಕಾರಿಗಳೊಂದಿಗೆ ಕಾಲೋನಿಗೆ ಭೇಟಿ ನೀಡಿ, ಗಾರ್ಡನ್ ಅಭಿವೃದ್ಧಿಗೆ ಸೂಕ್ತವಾಗಿರುವ ಸ್ಥಳವನ್ನು ಪರಿಶೀಲಿಸಿದರು.

ಸ್ಥಳದ ಲಭ್ಯತೆ, ಸಾರ್ವಜನಿಕರ ಅಗತ್ಯತೆ ಹಾಗೂ ಬಡಾವಣೆಯ ಮೂಲಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಗಾರ್ಡನ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕಾಲೋನಿಯಲ್ಲಿ ಹಸಿರು ಪರಿಸರ ನಿರ್ಮಾಣ, ಸಾರ್ವಜನಿಕರಿಗೆ ವಾಯುವಿಹಾರ ಹಾಗೂ ವಿಶ್ರಾಂತಿಗೆ ಅನುಕೂಲವಾಗುವಂತೆ ಗಾರ್ಡನ್ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ. ಗಾರ್ಡನ್ನಲ್ಲಿ ಅಗತ್ಯ ಸೌಲಭ್ಯಗಳು, ಹಸಿರು ಗಿಡಮರಗಳ ಬೆಳೆಸುವಿಕೆ, ವಾಕಿಂಗ್ ವ್ಯವಸ್ಥೆ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಾಧಿಕಾರದ ಆಯುಕ್ತರಾದ ರಾಜಶೇಖರ್ ಡಂಬಳ, ಅಭಿಯಂತರ ಶಂಭುಲಿಂಗ ಹೇರಲಗಿ ಸೇರಿದಂತೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದು, ಗಾರ್ಡನ್ ಅಭಿವೃದ್ಧಿ ಹಾಗೂ ಕಾಲೋನಿಯ ಅಗತ್ಯ ಮೂಲಸೌಕರ್ಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಬಡಾವಣೆಯ ನಾಗರಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಲಭ್ಯವಿರುವ ಸ್ಥಳವನ್ನು ಸಮರ್ಪಕವಾಗಿ ಬಳಸಿಕೊಂಡು ಸುಂದರ ಹಾಗೂ ಸಾರ್ವಜನಿಕ ಸ್ನೇಹಿ ಉದ್ಯಾನವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande