ನೈಸ್ ಯೋಜನೆ ಸಮಗ್ರ ತನಿಖೆಗೆ ಬೊಮ್ಮಾಯಿ ಆಗ್ರಹ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ನೈಸ್ ಯೋಜನೆಯಲ್ಲಿ ಹಲವು ನ್ಯೂನತೆಗಳು ಹಾಗೂ ಅಕ್ರಮಗಳ ಆರೋಪಗಳಿರುವ ಹಿನ್ನೆಲೆಯಲ್ಲಿ ಸರ್ಕಾರ ಸಮಗ್ರ ತನಿಖೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತ
ಬೊಮ್ಮಾಯಿ ಸಂಗ್ರಹ ಚಿತ್ರ


ಬೆಂಗಳೂರು, 16 ಆಗಸ್ಟ್ (ಹಿ.ಸ.):

ಆ್ಯಂಕರ್:

ನೈಸ್ ಯೋಜನೆಯಲ್ಲಿ ಹಲವು ನ್ಯೂನತೆಗಳು ಹಾಗೂ ಅಕ್ರಮಗಳ ಆರೋಪಗಳಿರುವ ಹಿನ್ನೆಲೆಯಲ್ಲಿ ಸರ್ಕಾರ ಸಮಗ್ರ ತನಿಖೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈಸ್ ರಸ್ತೆಯಿಂದ ಬೆಂಗಳೂರಿಗೆ ಕೆಲಮಟ್ಟಿನ ಅನುಕೂಲವಾಗಿದ್ದರೂ ಸಾರ್ವಜನಿಕರಿಂದ ಅತಿಯಾದ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಆರಂಭದಿಂದಲೂ ಇವೆ ಎಂದರು.

ಯೋಜನೆಯ ಅಕ್ರಮ ಹಾಗೂ ನ್ಯೂನತೆಗಳ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಹೈಕೋರ್ಟ್‌ನ ಇತ್ತೀಚಿನ ಗಮನಾರ್ಹ ಟಿಪ್ಪಣಿಯಿಂದ ವಿಷಯದ ಗಂಭೀರತೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಹಾಗೂ ಲೋಕೋಪಯೋಗಿ ಇಲಾಖೆ ನೀಡಿರುವ ವರದಿಗಳು ಸರ್ಕಾರದ ಬಳಿ ಇವೆ. ಯೋಜನೆಗಾಗಿ ಭೂಮಿ ಕಳೆದುಕೊಂಡ ಹಲವು ರೈತರಿಗೆ ಇನ್ನೂ ಸೂಕ್ತ ಪರಿಹಾರ ದೊರೆತಿಲ್ಲ. ಪರ್ಯಾಯ ನಿವೇಶನ ನೀಡುವುದಾಗಿ ಭರವಸೆ ನೀಡಿದ್ದರೂ ಕೆಲವರಿಗೆ ಇದುವರೆಗೆ ನಿವೇಶನ ನೀಡಿಲ್ಲ ಎಂದು ಆರೋಪಿಸಿದರು.

ಅತಿಯಾದ ಟೋಲ್ ವಸೂಲಿ ತಡೆದು ದರ ಕಡಿತಗೊಳಿಸಬೇಕು. ಇಡೀ ನೈಸ್ ಯೋಜನೆಯನ್ನು ಪುನರ್‌ವಿಮರ್ಶಿಸಿ ಸಮಗ್ರ ತನಿಖೆ ನಡೆಸುವ ಮೂಲಕ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande