ಘಟಪ್ರಭಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ: ನದಿತೀರದ ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಬಾಗಲಕೋಟೆ, 17 ಆಗಸ್ಟ್ (ಹಿ.ಸ.) ಆ್ಯಂಕರ್ : ಹಿಡಕಲ್ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಸಂಜೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಹೊರವಲಯದ ಘಟಪ್ರಭಾ ನದಿಗೆ 5 ಸಾವಿರ ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ. ನದಿ ಪಾತ್ರದಲ್ಲಿ ಮಳೆಯ ಪ್ರಮಾಣ ಮುಂದುವರಿದಿರುವುದರಿಂದ
ನಡಿ


ಬಾಗಲಕೋಟೆ, 17 ಆಗಸ್ಟ್ (ಹಿ.ಸ.)

ಆ್ಯಂಕರ್ : ಹಿಡಕಲ್ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಸಂಜೆ ಬಾಗಲಕೋಟೆ ಜಿಲ್ಲೆಯ ಮುಧೋಳ

ನಗರದ ಹೊರವಲಯದ ಘಟಪ್ರಭಾ ನದಿಗೆ 5 ಸಾವಿರ ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ. ನದಿ ಪಾತ್ರದಲ್ಲಿ ಮಳೆಯ ಪ್ರಮಾಣ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿ ನದಿಯಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹಿಡಕಲ್ ಜಲಾಶಯದ ಒಳಹರಿವು ಹಾಗೂ ಜಲಾಶಯದ ನೀರಿನ ಮಟ್ಟವನ್ನು ನಿರಂತರವಾಗಿ ಗಮನಿಸಲಾಗುತ್ತಿದ್ದು, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನಿಯಂತ್ರಿತವಾಗಿ ನದಿಗೆ ಹರಿಬಿಡಲಾಗುತ್ತಿದೆ. ಈಗಾಗಲೇ 5 ಸಾವಿರ ಕ್ಯುಸೆಕ್ ನೀರು ಘಟಪ್ರಭಾ ನದಿಗೆ ಹರಿದು ಬರುತ್ತಿರುವುದರಿಂದ ನದಿ ಪಾತ್ರದ ಗ್ರಾಮಸ್ಥರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ನದಿ ಪಾತ್ರದಲ್ಲಿ ಮಳೆ ಮುಂದುವರಿದಿರುವುದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದ್ದು, ಪರಿಸ್ಥಿತಿಗೆ ಅನುಗುಣವಾಗಿ ನದಿಗೆ ಬಿಡುವ ನೀರಿನ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ನದಿತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಯಾವುದೇ ಕಾರಣಕ್ಕೂ ನದಿ ನೀರಿನ ಸಮೀಪ ತೆರಳದಂತೆ ಹಾಗೂ ಜಾನುವಾರುಗಳನ್ನು ನದಿ ಪಾತ್ರಕ್ಕೆ ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ನದಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಗ್ರಾಮಸ್ಥರು ತಮ್ಮ ಕುಟುಂಬ ಸದಸ್ಯರು, ಮಕ್ಕಳು ಹಾಗೂ ವೃದ್ಧರೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಿಡಕಲ್ ಡ್ಯಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಭೀಮಸೇನ್ ಬಿರಾದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನದಿಗೆ ನೀರು ಹರಿಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಸೇತುವೆಗಳು, ಹಳ್ಳ-ಕೊಳ್ಳಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ಸಂಚರಿಸುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ನೀರಿನ ರಭಸ ಹೆಚ್ಚಾಗಿರುವ ಸಂದರ್ಭದಲ್ಲಿ ನದಿ ಅಥವಾ ಹಳ್ಳಗಳನ್ನು ದಾಟಲು ಪ್ರಯತ್ನಿಸಬಾರದು. ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವ ಮೂಲಕ ಯಾವುದೇ ಅನಾಹುತ ಸಂಭವಿಸದಂತೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಜಲಾಶಯ ಹಾಗೂ ನದಿ ನೀರಿನ ಪರಿಸ್ಥಿತಿಯ ಕುರಿತು ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande