
ಬಳ್ಳಾರಿ, 17 ಆಗಸ್ಟ್ (ಹಿ.ಸ.)
ಆ್ಯಂಕರ್ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಬಳ್ಳಾರಿ ಜಿಲ್ಲೆಯಾದ್ಯಂತ ಆಗಸ್ಟ್ 18ರಂದು ‘ನಶಾಮುಕ್ತ ಭಾರತ್ ಅಭಿಯಾನ'ದ 5ನೇ ವರ್ಷದ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅಂತಾರಾಷ್ಟಿಯ ಮಾದಕ ವಸ್ತು ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ಯುವಜನತೆ ಮತ್ತು ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಪ್ರತಿಜ್ಞಾ ವಿಧಿ ಸ್ವೀಕಾರ: ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಆಗಸ್ಟ್ 18ರಂದು ಏಕಕಾಲದಲ್ಲಿ ಮಾದಕ ವಸ್ತು ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸುವುದು.
ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು: ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮ್ಯಾರಥಾನ್, ವಾಕಥಾನ್, ಬೀದಿ ನಾಟಕಗಳು, ಚಿತ್ರಕಲೆ ಹಾಗೂ ರೇಖಾಚಿತ್ರ ಸ್ಪರ್ಧೆಗಳನ್ನು ಆಯೋಜಿಸುವುದು.
ಜಾಗೃತಿ ಜಾಥಾ: ಪ್ರಮುಖ ರಸ್ತೆಗಳು, ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಜಾಥಾ ನಡೆಸುವುದು. ಆನ್ಲೈನ್ ಇ-ಪ್ರತಿಜ್ಞೆ: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಅಧಿಕೃತ ಪೋರ್ಟಲ್ (https://nmba.dosje.gov.in/pledge?type=e-pledge) ಮೂಲಕ ಆನ್ಲೈನ್ ಪ್ರಮಾಣ ವಚನ ಸ್ವೀಕರಿಸಿ ಇ-ಪ್ರಮಾಣಪತ್ರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಎಲ್ಲಾ ಜಾಗೃತಿ ಕಾರ್ಯಕ್ರಮಗಳ ಛಾಯಾಚಿತ್ರ ಹಾಗೂ ವರದಿಗಳನ್ನು ಎನ್ಎಂಬಿಎ ಪೋರ್ಟಲ್ನಲ್ಲಿ ಕಡ್ಡಾಯವಾಗಿ ಅಪ್ಲೋಡ್ ಮಾಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್