
ಬೆಂಗಳೂರು, 17 ಆಗಸ್ಟ್ (ಹಿ.ಸ.):
ಆ್ಯಂಕರ್:
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು ಸೋಮವಾರ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಎತ್ತಿನಹೊಳೆ ನೀರು ಪೂರೈಕೆ ಯೋಜನೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್, ನಂಜೇಗೌಡ, ನಾರಾಯಣಸ್ವಾಮಿ, ಕೊತ್ತನೂರು ಮಂಜುನಾಥ್, ಪ್ರದೀಪ್ ಈಶ್ವರ್, ಸುಬ್ಬಾರೆಡ್ಡಿ, ಪುಟ್ಟಸ್ವಾಮಿಗೌಡ, ಕೋಲಾರ ಪರಿಷತ್ ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.