ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರ ಹಾಸನ ಪ್ರವಾಸ
ಹಾಸನ, 17 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಸದಸ್ಯ ಸತ್ಯನಾರಾಯಣಶೆಟ್ಟಿ ಅವರು ಆ.19ರಂದು ಹಾಸನ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹ
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರ ಹಾಸನ ಪ್ರವಾಸ


ಹಾಸನ, 17 ಆಗಸ್ಟ್ (ಹಿ.ಸ.):

ಆ್ಯಂಕರ್:

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಸದಸ್ಯ ಸತ್ಯನಾರಾಯಣಶೆಟ್ಟಿ ಅವರು ಆ.19ರಂದು ಹಾಸನ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಭೇಟಿ ಮತ್ತು ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ವಸತಿ ನಿಲಯ, ಅಂಗನವಾಡಿ, ಶಾಲೆ, ಆಸ್ಪತ್ರೆ, ಪೊಲೀಸ್ ಠಾಣೆ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸಂಜೆ 6 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande