
ಬೆಂಗಳೂರು, 17 ಆಗಸ್ಟ್ (ಹಿ.ಸ.):
ಆ್ಯಂಕರ್:
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಗಾಯನದ ವೇಳೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದೆ.
ಆಗಸ್ಟ್ 15 ರಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಧ್ವಜಾರೋಹಣದ ನಂತರ ರಾಷ್ಟ್ರಗೀತೆ ಗಾಯನದ ಸಮಯದಲ್ಲಿ ಎನ್. ರವಿಕುಮಾರ್ ಅವರು ಧ್ವಜಕ್ಕೆ ಸಾಮಾನ್ಯ ರೀತಿಯಲ್ಲಿ ನಮಸ್ಕರಿಸುವ ಬದಲು ಆರ್ಎಸ್ಎಸ್ ಶೈಲಿಯ ಸಲ್ಯೂಟ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗೆ ಎಸಗಿದ ನೇರ ಅಗೌರವ ಎಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಎಂಎಲ್ಸಿ ರವಿಕುಮಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ದೂರಿನಲ್ಲಿ ಆಗ್ರಹಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R