
ಬಳ್ಳಾರಿ, 17 ಆಗಸ್ಟ್ (ಹಿ.ಸ.):
ಆ್ಯಂಕರ್: ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ಉಪಕೇಂದ್ರದಿ0ದ ಸರಬರಾಜು ಆಗುವ ಫೀಡರ್-72 ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ತಿಲಕ್ ನಗರ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್