
ಬಳ್ಳಾರಿ, 17 ಆಗಸ್ಟ್ (ಹಿ.ಸ.)
ಆ್ಯಂಕರ್: ಕರ್ನಾಟಕ ಸರ್ಕಾರದ ವತಿಯಿಂದ ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಆನ್ಲೈನ್ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಲಾ ಒಂದರಂತೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಈ ಸಂಘಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ.
ನೋಂದಣಿಯ ವಿವರ:
ವಯೋಮಿತಿ: 16 ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸದಸ್ಯತ್ವ ಪಡೆಯಲು ಅರ್ಹರಾಗಿರುತ್ತಾರೆ. ಸದಸ್ಯರ ಸಂಖ್ಯೆ: ಪ್ರತಿ ಸಂಘದ ರಚನೆಗೆ ಕನಿಷ್ಠ 100 ಯುವ ಸಮೂಹದ ಸದಸ್ಯತ್ವ ಕಡ್ಡಾಯವಾಗಿರುತ್ತದೆ. ನೋಂದಣಿ ಪ್ರಕ್ರಿಯೆ: ಆಧಾರ್ ಕಾರ್ಡ್ ಆಧಾರಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದ್ದು, ನೋಂದಣಿ ಶುಲ್ಕವಾಗಿ ರೂ.10 ನಿಗದಿಪಡಿಸಲಾಗಿದೆ. ಒಬ್ಬ ವ್ಯಕ್ತಿಗೆ ಕೇವಲ ಒಂದು ಸಂಘಕ್ಕೆ ಮಾತ್ರ ಸೇರಲು ಅವಕಾಶವಿದೆ.
ಅರ್ಜಿ ಸಲ್ಲಿಸುವ ವೆಬ್ಸೈಟ್: ಆಸಕ್ತ ಯುವಜನರು ಅಧಿಕೃತ ಪೋರ್ಟಲ್ https://bjys.karnataka.gov.in/ ಮೂಲಕ ನೇರವಾಗಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯನ್ನು ಅಥವಾ ಮೊಬೈಲ್ ಸಂಖ್ಯೆಗಳಾದ 8861420334, 8971238689 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್