ಎಸ್.ಎಸ್.ಎಲ್.ಸಿ ಪರೀಕ್ಷೆ: ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಕೊಪ್ಪಳ, 17 ಆಗಸ್ಟ್ (ಹಿ.ಸ.) ಆ್ಯಂಕರ್: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಕೊಪ್ಪಳ ಜಿಲ್ಲೆಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತ
ಎಸ್.ಎಸ್.ಎಲ್.ಸಿ ಪರೀಕ್ಷೆ: ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ


ಕೊಪ್ಪಳ, 17 ಆಗಸ್ಟ್ (ಹಿ.ಸ.)

ಆ್ಯಂಕರ್: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಕೊಪ್ಪಳ ಜಿಲ್ಲೆಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಯ (ಯಲಬುರ್ಗಾ ತಾಲ್ಲೂಕು) ಕುಕನೂರಿನ ಎಸ್.ಎಫ್.ಎಸ್ ಹೈಸ್ಕೂಲ್ ವಿದ್ಯಾರ್ಥಿನಿ ಅನುಷಾ ಭರತರೆಡ್ಡಿ ಸೋಮರೆಡ್ಡಿ ಅವರು 625ಕ್ಕೆ 622 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಕನಕಗಿರಿಯ (ಗಂಗಾವತಿ ತಾಲ್ಲೂಕು) ಮೊರಾರ್ಜಿ ದೇಸಾಯಿ ವಸತಿ ಶಾಲೆ(ಬಿ.ಸಿ 605)ಯ ವಿದ್ಯಾರ್ಥಿ ನಾಗರಾಜ ಶಿವಶಂಕರಗೌಡ ಮಾಲಿಪಾಟೀಲ ಮತ್ತು ಯಲಬುರ್ಗಾದ ಸರಕಾರಿ ಬಾಲಕೀಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ವೇತಾ ಗೋವಿಂದಪ್ಪ ಸಾನಿ, ಈ ಇಬ್ಬರೂ 625ಕ್ಕೆ 621 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದರೆ, ಯಲಬುರ್ಗಾ ತಾಲ್ಲೂಕಿನ ಹೊಸಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಶುಭಪ್ರೀಯಾ ಮತ್ತು ಕುಷ್ಟಗಿ ತಾಲ್ಲೂಕಿನ ಕಾಟಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಬಿಸಿ)ಯ ವಿದ್ಯಾರ್ಥಿ ಅಭಿ ಹುನಕುಂಟಿ ಮಲ್ಲನಗೌಡ, ಈ ಇಬ್ಬರೂ 625ಕ್ಕೆ 620 ಅಂಕಗಳನ್ನು ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಈ ಐದು ವಿದ್ಯಾರ್ಥಿಗಳಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಹಾಗೂ ಇತರೆ ಗಣ್ಯರು ಸೇರಿ ಸನ್ಮಾನಿಸಿ, ಅಭಿನಂಧಿಸಿದರು. ಕೆಲವು ವಿದ್ಯಾರ್ಥಿಗಳ ಪರವಾಗಿ ಅವರ ಪಾಲಕರು ಸನ್ಮಾನ ಸ್ವೀಕರಿಸಿದರು.

ಸಮಾರಂಭದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಇತರೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande