ಜಮಖಂಡಿಯಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ
ಬಾಗಲಕೋಟೆ, 17 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾದ ಮೂರು ಜಿಲ್ಲೆಗಳ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೊಂಡ ಅವರು ಚಾಲನೆ ನೀಡಿದರು. ಪಂದ್ಯಾವಳಿಯ ಉದ್ಘಾಟನಾ ಕ
ಪಾಂಡೆ


ಬಾಗಲಕೋಟೆ, 17 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾದ ಮೂರು ಜಿಲ್ಲೆಗಳ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೊಂಡ ಅವರು ಚಾಲನೆ ನೀಡಿದರು.

ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಕ್ರೀಡಾ ಕ್ಷೇತ್ರದಲ್ಲಿ ಯುವಜನತೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುವಂತೆ ಅವರು ಕರೆ ನೀಡಿದರು.

ಪಂದ್ಯಾವಳಿಯಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ನೂರಾರು ಸಂಖ್ಯೆಯ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿದ್ದು, ಜಮಖಂಡಿಯ ಕ್ರೀಡಾಂಗಣದಲ್ಲಿ ಕ್ರೀಡಾ ಸಂಭ್ರಮ ಮನೆಮಾಡಿತ್ತು. ವಿವಿಧ ತಂಡಗಳ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡುವ ಉತ್ಸಾಹದೊಂದಿಗೆ ಪಂದ್ಯಾವಳಿಯಲ್ಲಿ ಪಾಲ್ಗೊಂಡರು.

ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡುವ ಮೂಲಕ ಯುವ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಅಗತ್ಯವಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಪಂದ್ಯಾವಳಿಗೆ ಆಗಮಿಸಿದ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆಡಳಿತ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿತ್ತು. ಕ್ರೀಡಾಪಟುಗಳ ವಸತಿ, ಊಟ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಕಲ್ಪಿಸಲಾಗಿದ್ದು, ಪಂದ್ಯಾವಳಿ ಸುಗಮವಾಗಿ ನಡೆಯಲು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಮೂರು ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳಿಗೆ ಉತ್ತಮ ಆತಿಥ್ಯ ಹಾಗೂ ಕ್ರೀಡಾ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಆಯೋಜಕರು ಶ್ರಮಿಸಿದ್ದು, ಕ್ರೀಡಾಪಟುಗಳಿಗೂ ಈ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು.

ಪಂದ್ಯಾವಳಿಯ ಮೂಲಕ ಮೂರು ಜಿಲ್ಲೆಗಳ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ದೊರೆತಿದ್ದು, ಮುಂದಿನ ಹಂತಗಳಲ್ಲಿ ಇನ್ನಷ್ಟು ಪ್ರತಿಭಾವಂತ ಕ್ರೀಡಾಪಟುಗಳು ಹೊರಹೊಮ್ಮುವ ನಿರೀಕ್ಷೆ ಮೂಡಿದೆ. ಪಂದ್ಯಾವಳಿಯ ವಿವಿಧ ಹಂತಗಳಲ್ಲಿ ರೋಚಕ ಹಣಾಹಣಿ ನಡೆಯುತ್ತಿದ್ದು, ಕ್ರೀಡಾಭಿಮಾನಿಗಳ ಗಮನ ಸೆಳೆಯುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande