
ಬೆಂಗಳೂರು, 17 ಆಗಸ್ಟ್ (ಹಿ.ಸ.):
ಆ್ಯಂಕರ್:ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಮೊಟ್ಟೆಯ ದರವನ್ನು ಹೆಚ್ಚಿಸುವ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರು ಈ ವಿಚಾರ ಪ್ರಸ್ತಾಪಿಸಿ, ಸರ್ಕಾರ ಪ್ರಸ್ತುತ ಪ್ರತಿ ಮೊಟ್ಟೆಗೆ 6 ರೂಪಾಯಿ ನೀಡುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಒಂದು ವರ್ಷದಿಂದ ಮೊಟ್ಟೆಯ ದರ 8 ರೂಪಾಯಿಗಿಂತ ಹೆಚ್ಚಿದೆ. ಹೀಗಾಗಿ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಸರ್ಕಾರ ಹಣ ನೀಡಬೇಕು ಅಥವಾ ಮೊಟ್ಟೆ ವಿತರಣೆಗೆ ಪ್ರತ್ಯೇಕ ಏಜೆನ್ಸಿ ನೇಮಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ರಾಷ್ಟ್ರೀಯ ಮಟ್ಟದ ದರವನ್ನು ಆಧರಿಸಿ ರಾಜ್ಯದಲ್ಲಿ ಮೊಟ್ಟೆಯ ದರ ನಿಗದಿಪಡಿಸಲಾಗುತ್ತಿದೆ. ಪ್ರಸ್ತುತ ರಾಷ್ಟ್ರೀಯ ಮಟ್ಟದಲ್ಲಿ ಮೊಟ್ಟೆಯ ದರ 7 ರೂಪಾಯಿಯಷ್ಟಿದೆ. ದರ ಹೆಚ್ಚಳದ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.