ಶ್ರಾವಣದ ಮೊದಲ ಮಂಗಳವಾರ: ಮುಚಖಂಡಿ ವೀರಭದ್ರೇಶ್ವರನಿಗೆ ವಿಶೇಷ ಪೂಜೆ
ಬಾಗಲಕೋಟೆ, 18 ಆಗಸ್ಟ್ (ಹಿ.ಸ.) ಆ್ಯಂಕರ್ : ಶ್ರಾವಣ ಮಾಸದ ಮೊದಲ ಮಂಗಳವಾರದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಮುಚಖಂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನ ಹಾಗೂ ಅಲಂಕಾರವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು ಎಂದು ಆಡಳಿತ ಮಂಡಳಿ ಸದಸ್ಯ ರಮೇಶ
ಪೂಜೆ


ಬಾಗಲಕೋಟೆ, 18 ಆಗಸ್ಟ್ (ಹಿ.ಸ.)

ಆ್ಯಂಕರ್ : ಶ್ರಾವಣ ಮಾಸದ ಮೊದಲ ಮಂಗಳವಾರದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಮುಚಖಂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನ ಹಾಗೂ ಅಲಂಕಾರವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು ಎಂದು ಆಡಳಿತ ಮಂಡಳಿ ಸದಸ್ಯ ರಮೇಶ ಪಾಟೀಲ್ ತಿಳಿಸಿದರು.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಮುಚಖಂಡಿ ಶ್ರೀ ವೀರಭದ್ರೇಶ್ವರ ದೇವಾಲಯಕ್ಕೆ ಬೆಳಗ್ಗಿನಿಂದಲೇ ಭಕ್ತರ ದಂಡೇ ಹರಿದುಬಂತು. ಬೆಳಿಗ್ಗೆ 5 ಗಂಟೆಯಿಂದಲೇ ನೂರಾರು ಮಹಿಳೆಯರು, ಮಕ್ಕಳು ಹಾಗೂ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿಗೀತೆ, ಪೂಜಾ ವಿಧಿವಿಧಾನ ಹಾಗೂ ಧಾರ್ಮಿಕ ವಾತಾವರಣ ಕಳೆಗಟ್ಟಿತ್ತು.

ಶ್ರಾವಣ ಮಾಸದ ಮೊದಲ ಮಂಗಳವಾರದ ನಿಮಿತ್ತ ಮಹಿಳೆಯರು ಮಂಗಳಗೌರಿ ಪೂಜೆಯನ್ನು ನೆರವೇರಿಸಿ, ಬಳಿಕ ಮುಚಖಂಡಿ ಶ್ರೀ ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವರಿಗೆ ವಿವಿಧ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿದ್ದು, ಅಭಿಷೇಕ, ಅರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.

ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ಪೂಜೆ, ಆರತಿ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಕುಟುಂಬದ ಸುಖ-ಶಾಂತಿ, ಆರೋಗ್ಯ, ಸಮೃದ್ಧಿ ಹಾಗೂ ಉತ್ತಮ ಮಳೆ-ಬೆಳೆಗಾಗಿ ದೇವರಲ್ಲಿ ಪ್ರಾರ್ಥಿಸಿದರು. ದೇವಾಲಯಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ಶಿಸ್ತಿನಿಂದ ನಿಂತು ದೇವರ ದರ್ಶನ ಪಡೆದು ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಶ್ರಾವಣ ಮಾಸದ ಮೊದಲ ಮಂಗಳವಾರದ ಹಿನ್ನೆಲೆಯಲ್ಲಿ ಮುಚಖಂಡಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಭಕ್ತರ ಸಂಚಾರ ಹೆಚ್ಚಾಗಿದ್ದು, ವಿವಿಧೆಡೆಯಿಂದ ಆಗಮಿಸಿದ ಭಕ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ದರ್ಶನ ಪಡೆದು ಧನ್ಯತೆ ಅನುಭವಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande