
ಕುಷ್ಟಗಿ, 18 ಆಗಸ್ಟ್ (ಹಿ.ಸ.)
ಆ್ಯಂಕರ್ : ಕುಷ್ಟಗಿ ಪಟ್ಟಣದ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಇಂಗ್ಲೀಷ್ ವಿಷಯ ಶಿಕ್ಷಕ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಂಗ್ಲೀಷ್ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25 ರೊಳಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆ, ಕುಷ್ಟಗಿ ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9900617290 ಗೆ ಸಂಪರ್ಕಿಸಬಹುದು ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್