
ನವದೆಹಲಿ, 18 ಆಗಸ್ಟ್ (ಹಿ.ಸ.):
ಆ್ಯಂಕರ್:ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ತಂಡದ ಮೊದಲ ಪರಿಚಯಾತ್ಮಕ ಸಭೆ ಆ.22ರಂದು ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ನೂತನ ರಾಷ್ಟ್ರೀಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ರಾಷ್ಟ್ರೀಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ನೂತನ ತಂಡ ರಚನೆಯಾದ ಬಳಿಕ ನಡೆಯುತ್ತಿರುವ ಮೊದಲ ಪ್ರಮುಖ ಸಂಘಟನಾತ್ಮಕ ಕಾರ್ಯಕ್ರಮ ಇದಾಗಿದ್ದು, ಪದಾಧಿಕಾರಿಗಳ ನಡುವೆ ಸಮನ್ವಯ ಮತ್ತು ಉತ್ತಮ ಹೊಂದಾಣಿಕೆ ಮೂಡಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ. ಮುಂಬರುವ ಸಂಘಟನಾತ್ಮಕ ಕಾರ್ಯಕ್ರಮಗಳು, ಜವಾಬ್ದಾರಿಗಳ ಹಂಚಿಕೆ ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಿಂದ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯತಂತ್ರದ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಯುವ ಮತ್ತು ಅನುಭವಿ ನಾಯಕರ ಸಮತೋಲನದೊಂದಿಗೆ ರಚಿಸಲಾಗಿರುವ ನೂತನ ತಂಡಕ್ಕೆ ಕಾರ್ಯವಿಭಜನೆ ಹಾಗೂ ಸಂಘಟನೆಯ ಮುಂದಿನ ದಿಕ್ಕು ನಿರ್ಧರಿಸುವ ದೃಷ್ಟಿಯಿಂದ ಈ ಸಭೆ ಮಹತ್ವದ್ದಾಗಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.