
ಬಳ್ಳಾರಿ, 18 ಆಗಸ್ಟ್ (ಹಿ.ಸ.)
ಆ್ಯಂಕರ್ : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ಅವರೇ ಕೇಂದ್ರವಾಗಿದ್ದು, ಅವರ ವಿರುದ್ಧ 32 ಪ್ರಕರಣಗಳು ದಾಖಲಾಗಿದ್ದು ಸಚಿವ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆಯು ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಬಳ್ಳಾರಿಯ ಜಿಲ್ಲಾಧಿಕಾರಿಗಳ ಹಳೆಯ ಕಚೇರಿಯ ಮುಂಭಾಗದಲ್ಲಿ ಬಿಜೆಪಿ ಮತ್ತು ಬಿಜೆಪಿ ವಾಲ್ಮೀಕಿ ಮೋರ್ಚಾವು ಸೋಮವಾರದಿಂದ ಪ್ರಾರಂಭಿಸಿರುವ ಅನಿರ್ಧಿಷ್ಟಾವಧಿಯ ಪ್ರತಿಭಟನೆಯು ಮಂಗಳವಾರಕ್ಕೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ಪಕ್ಷವು ಕಳಂಕಿತರು ಮತ್ತು ಭ್ರಷ್ಟಾಚಾರಿಗಳಿಗೆ ಸಚಿವ ಸ್ಥಾನ ನೀಡುವ ಮೂಲಕ ಪಕ್ಷದ ಬೌದ್ಧಿಕಮಟ್ಟವು ದಿವಾಳಿ ಆಗಿರುವುದನ್ನು ಸಾಬೀತು ಪಡಿಸಿದೆ. ಬಿ. ನಾಗೇಂದ್ರ ವಿರುದ್ಧ ಇಡಿ, ಸಿಬಿಐ ತನಿಖೆಗಳು ಮುಂದುವರೆದಿದ್ದು, ಕೂಡಲೇ ರಾಜೀನಾಮೆ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್