ಇಂದು ಬಿಡದಿ ಟೌನ್ ಶಿಪ್ ವಿರೋಧಿಸಿ ಬೆಂಗಳೂರಿನಲ್ಲಿ ಜೆಡಿಎಸ್ ಧರಣಿ
ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
ಇಂದು ಬಿಡದಿ ಟೌನ್ ಶಿಪ್ ವಿರೋಧಿಸಿ ಬೆಂಗಳೂರಿನಲ್ಲಿ ಜೆಡಿಎಸ್ ಧರಣಿ


ಬೆಂಗಳೂರು, 18 ಆಗಸ್ಟ್ (ಹಿ.ಸ.):

ಆ್ಯಂಕರ್:

ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ವಿರೋಧಿಸಿ ಜಾತ್ಯತೀತ ಜನತಾದಳ (ಜೆಡಿಎಸ್) ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

ಆಗಸ್ಟ್ 18 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕೆಜಿ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆ ಬಳಸಲು ಸೂಚಿಸಲಾಗಿದೆ.

ಫ್ರೀಡಂ ಪಾರ್ಕ್ ಜಂಕ್ಷನ್ನಿಂದ ಕನಕದಾಸ ವೃತ್ತದ ಕಡೆಗೆ ಹೋಗುವ ಮತ್ತು ಬರುವ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್. ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ಫ್ಲೈಓವರ್ ರಸ್ತೆಯಲ್ಲಿ ತೆರಳಬಹುದು. ವಾಹನ ದಟ್ಟಣೆ ತಡೆಗಟ್ಟಲು ಹಳೆ ಜೆಡಿಎಸ್ ಕಚೇರಿ ರಸ್ತೆಯನ್ನೂ ಬಳಸಲು ಅವಕಾಶ ಕಲ್ಪಿಸಲಾಗಿದೆ.

ಸುಬ್ಬಣ್ಣ ಜಂಕ್ಷನ್ನಿಂದ ಎಂಟಿಆರ್ ಜಂಕ್ಷನ್ ಕಡೆಗೆ ಬರುವ ರಸ್ತೆಯು ಹಾಲಿ ಓನ್ವೇ ಸಂಚಾರ ರಸ್ತೆ, ಇಂದಿನ ಪ್ರತಿಭಟನೆ ತಾತ್ಕಾಲಿಕವಾಗಿ ಟೂ-ವೇ ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಗಾಂಧಿನಗರದ ಕಡೆಗೆ ಹೋಗುವ ವಾಹನಗಳು ಈ ರಸ್ತೆಯನ್ನು ಬಳಸಬಹುದು.

ಖೋಡೆ ಜಂಕ್ಷನ್ನಿಂದ ಮಹಾರಾಣಿ ಜಂಕ್ಷನ್ ವರೆಗೆ ವೈ. ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆಜಿ ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ ಎಂದು ಸಂಚಾರ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

----------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande