


ಕೊಪ್ಪಳ, 18 ಆಗಸ್ಟ್ (ಹಿ.ಸ.)
ಆ್ಯಂಕರ್ : ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 28 ರಂದು ಆಚರಿಸಲಾಗುವ 2026-27ನೇ ಸಾಲಿನ “ಬ್ರಹ್ಮಶ್ರೀ ನಾರಾಯಣಗುರು ಜಯಂತಿ”ಯನ್ನು ಆಚರಿಸುವ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.
ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಅಧೀನ ಕಚೇರಿಗಳಲ್ಲಿ ಆಗಸ್ಟ್ 28 ರಂದು ಕಡ್ಡಾಯವಾಗಿ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ, ಸಮಾಜದ ಮುಖಂಡರಾದ ಈರಣ್ಣ ಈ., ವಿಶ್ವನಾಥ ಪಿ., ಅನಿಲ್ಕುಮಾರ, ಗೋವಿಂದರಾಜ ಕಾರಟಗಿ, ಎ.ಡಿ. ರವಿ, ವೆಂಕಟೇಶ ಗಂಗಾವತಿ, ಕಿರಣಕುಮಾರ ಸೇರಿದಂತೆ ಸಮಾಜದ ಇತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್