ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ-2026
ಗದಗ, 18 ಆಗಸ್ಟ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ, ಸಾಧನೆಗಳ ಸರದಾರ, ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗ
ಫೋಟೋ


ಗದಗ, 18 ಆಗಸ್ಟ್ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ, ಸಾಧನೆಗಳ ಸರದಾರ, ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ: ಡಿ. ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆಯ ಸಮಾರಂಭ ಕಾರ್ಯಕ್ರಮವನ್ನು ನಗರದ ಮುಳಗುಂದ ರೋಡ್ ಕನಕ ಭವನದಲ್ಲಿ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರುಗಳು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಉನ್ನತ ಶಿಕ್ಷಣ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ ಕಾರ್ಯಕ್ರವನ್ನು ಉದ್ಘಾಟಿಸುವರು. ಗದಗ ಶಾಸಕ ಡಾ. ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಶಾಸಕರುಗಳಾದ ಸಿ.ಸಿ.ಪಾಟೀಲ, ಡಾ.ಚಂದ್ರು ಲಮಾಣಿ, ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಹಾಗೂ ಅಶೋಕ ಮಂದಾಲಿ ಅವರುಗಳು ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಸಹಕಾರ ಸಂಘಗಳ ನಿಬಂಧಕರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ವಿ.ವೆಂಕಟೇಶ , ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಾನಕಿ ಕೆ.ಎಂ. ಅವರುಗಳು ಆಗಮಿಸುವರು.

ರೋಣದ ತಾಲೂಕಾ ಹಿಂದುಳಿದ ವರ್ಗಗಳ ವಿಸ್ತಾಣಾಧಿಕಾರಿ ಪ್ರಭಾಕರ ಉಳ್ಳಾಗಡ್ಡಿ ಉಪನ್ಯಾಸ ನೀಡುವರು.

ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್ ಹಾಗೂ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ.ಎಮ್. ತುಂಬರಮಟ್ಟಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande