
ಬೆಂಗಳೂರು, 18 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಜ್ಯಾದ್ಯಂತ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು, ಒಟ್ಟು 1,849 ಆಹಾರ ಮಳಿಗೆಗಳು, ಹಾಸ್ಟೆಲ್ಗಳು ಮತ್ತು ಗೋದಾಮುಗಳನ್ನು ತಪಾಸಣೆ ನಡೆಸಿ ನಿಯಮ ಉಲ್ಲಂಘಿಸಿದ 206 ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನೀಡಿರುವ ಮಾಹಿತಿಯ ಪ್ರಕಾರ,ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗಳು: 331 ಹಾಸ್ಟೆಲ್ಗಳನ್ನು ಪರಿಶೀಲಿಸಿ 556 ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದೆ.
ರಾಜ್ಯದ 186 ಪ್ರಮುಖ ಬಸ್ ನಿಲ್ದಾಣಗಳಲ್ಲಿ 889 ಆಹಾರ ಮಳಿಗೆಗಳನ್ನು ಪರಿಶೀಲಿಸಲಾಗಿದೆ.ಬಸ್ ನಿಲ್ದಾಣಗಳ ಆಹಾರ ಮಳಿಗೆಗಳು: ರಾಜ್ಯದ 186 ಪ್ರಮುಖ ಬಸ್ ನಿಲ್ದಾಣಗಳಲ್ಲಿ 889 ಆಹಾರ ಮಳಿಗೆಗಳನ್ನು ಪರಿಶೀಲಿಸಲಾಗಿದೆ.
206 ಆಹಾರ ಮಳಿಗೆಗಳಿಗೆ ನೋಟೀಸ್ ನೀಡಲಾಯಿತು, ಸ್ಥಳದಲ್ಲೇ ಒಟ್ಟು ₹55,000 ದಂಡ ವಸೂಲಿ ಮಾಡಲಾಗಿದೆ.
206 ಆಹಾರ ಮಳಿಗೆಗಳಿಗೆ ನೋಟೀಸ್ ನೀಡಲಾಯಿತು, ಸ್ಥಳದಲ್ಲೇ ಒಟ್ಟು ₹55,000 ದಂಡ ವಸೂಲಿ ಮಾಡಲಾಗಿದೆ. ನಿಯಮವನ್ನು ಉಲ್ಲಂಘಿಸಿದ 236 ಇ-ಕಾಮರ್ಸ್ ಮತ್ತು ಆಹಾರ ಉದ್ದಿಮೆಗಳ ಗೋದಾಮುಗಳನ್ನು ತಪಾಸಣೆ ನಡೆಸಲಾಯಿತು,
ನೈರ್ಮಲ್ಯ ಕಾಪಾಡದ 8 ಗೋದಾಮುಗಳಿಗೆ ₹1.97 ಲಕ್ಷ ದಂಡ ವಿಧಿಸಲಾಗಿದೆ. ಜೊತೆಗೆ, ನಿಯಮ ಉಲ್ಲಂಘಿಸಿದ 44 ಗೋದಾಮುಗಳ ವಿರುದ್ಧ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ತಪಾಸಣೆ ವೇಳೆ ಅವಧಿ ಮುಗಿದ ಮತ್ತು ತಪ್ಪು ಲೇಬಲ್ ಹೊಂದಿದ್ದ 429 ಕೆಜಿ ಮಟನ್ ಹಾಗೂ ಚಿಕನ್, 203 ಕೆಜಿ ಮೀನು ಹಾಗೂ 76 ಕೆಜಿ ಕೊಳೆತ ತರಕಾರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ರಾಜ್ಯದ 186 ಪ್ರಮುಖ ಬಸ್ ನಿಲ್ದಾಣಗಳಲ್ಲಿರುವ 889 ಆಹಾರ ಮಳಿಗೆಗಳನ್ನು ತಪಾಸಣೆ ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R