ಬಳ್ಳಾರಿ : ಉಚಿತ ಟೂಲ್ರೂಮ್ ಮಶಿನಿಸ್ಟ್ ತರಬೇತಿ
ಬಳ್ಳಾರಿ, 18 ಆಗಸ್ಟ್ (ಹಿ.ಸ.) ಆ್ಯಂಕರ್ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವ್ಯಾಪ್ತಿಯಲ್ಲಿರುವ ಬಳ್ಳಾರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಎಸ್ಎಸ್ಎಲ್ಸಿ (10ನೇ ತರಗತಿ) ತೇರ್ಗಡೆಯಾದ ಅಭ್ಯರ್ಥಿಗಳಿಗೆ ಉಚಿತ ‘ಟೂಲ್ರೂಮ
ಬಳ್ಳಾರಿ : ಉಚಿತ ಟೂಲ್ರೂಮ್ ಮಶಿನಿಸ್ಟ್ ತರಬೇತಿ


ಬಳ್ಳಾರಿ, 18 ಆಗಸ್ಟ್ (ಹಿ.ಸ.)

ಆ್ಯಂಕರ್ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವ್ಯಾಪ್ತಿಯಲ್ಲಿರುವ ಬಳ್ಳಾರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಎಸ್ಎಸ್ಎಲ್ಸಿ (10ನೇ ತರಗತಿ) ತೇರ್ಗಡೆಯಾದ ಅಭ್ಯರ್ಥಿಗಳಿಗೆ ಉಚಿತ ‘ಟೂಲ್ರೂಮ್ ಮಶಿನಿಸ್ಟ್' ತಾಂತ್ರಿಕ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೇವಲ 10 ಸೀಟುಗಳು ಮಾತ್ರ ಬಾಕಿ ಉಳಿದಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬಹುಕೌಶಲ್ಯ ತರಬೇತಿ: ಈ ಏಕೈಕ ಕೋರ್ಸ್ನಲ್ಲಿ ಫಿಟ್ಟರ್, ಟರ್ನರ್, ಮಿಲ್ಲರ್, ಸಿಎನ್ಸಿ, ಕ್ಯಾಡ್-ಕ್ಯಾಮ್ ಹಾಗೂ ಟೂಲ್ & ಡೈ ಮೇಕಿಂಗ್ ಟ್ರೇಡ್ಗಳಲ್ಲಿ ಪ್ರಾಯೋಗಿಕವಾಗಿ (ಆನ್ ದಿ ಜಾಬ್) ತರಬೇತಿ ನೀಡಲಾಗುತ್ತದೆ.

ಹೆಚ್ಚುವರಿ ಕೌಶಲ್ಯಗಳು: ತಾಂತ್ರಿಕ ವಿಷಯಗಳ ಜೊತೆಗೆ ಆಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳ ತರಬೇತಿಯನ್ನೂ ಕಲ್ಪಿಸಲಾಗುತ್ತದೆ. ಸುಧಾರಿತ ತಂತ್ರಜ್ಞಾನ ಮತ್ತು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಕೇಂದ್ರದಲ್ಲಿ, ಕೈಗಾರಿಕಾ ಕ್ಷೇತ್ರದ ಅನುಭವವಿರುವ ಪರಿಣಿತರಿಂದ ತರಬೇತಿ ಸಿಗಲಿದೆ.

ಈ ತರಬೇತಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ ಹಾಗೂ ಆಟೋಮೊಬೈಲ್ ವಲಯದ ಕೈಗಾರಿಕೆಗಳಲ್ಲಿ ನೇರ ಉದ್ಯೋಗಾವಕಾಶಗಳನ್ನು ದೊರಕಿಸಿಕೊಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ಪ್ರವೇಶವನ್ನು ‘ಮೊದಲು ಬಂದವರಿಗೆ ಮೊದಲ ಆದ್ಯತೆ’ ಆಧಾರದ ಮೇಲೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ), ಐಶ್ವರ್ಯ ಕಾಲೋನಿ (ಸರ್ಕಾರಿ ಐ.ಟಿ.ಐ ಕ್ಯಾಂಪಸ್), ರೇಡಿಯೊ ಪಾರ್ಕ್, ಕಾಂಟೋನ್ಮೆ0ಟ್, ಬಳ್ಳಾರಿ – 583104 ಅಥವಾ ದೂ.08392-200087, ಮೊ.9620057086, 6361880236, 7795680677 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಟಿಟಿಸಿ ಯ ಪ್ರಾಂಶುಪಾಲರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande