ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ
ಉಪಸಭಾಪತಿಯಾಗಿ ಉಮಾಶ್ರೀ
Umashri


ಬೆಂಗಳೂರು, 18 ಆಗಸ್ಟ್ (ಹಿ.ಸ.):

ಆ್ಯಂಕರ್:

ವಿಧಾನ ಪರಿಷತ್ ಉಪಸಭಾಪತಿ ಹುದ್ದೆಗೆ ಕಾಂಗ್ರೆಸ್ನ ಹಿರಿಯ ಸದಸ್ಯೆ, ಖ್ಯಾತ ನಟಿ ಉಮಾಶ್ರೀ ಅವರು ಆ.18ರ ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಎಂ.ಕೆ.ಪ್ರಾಣೇಶ್ ಅವರ ರಾಜೀನಾಮೆಯಿಂದ ಪರಿಷತ್ತಿನ ಉಪಸಭಾಪತಿ ಸ್ಥಾನ ಖಾಲಿಯಾಗಿತ್ತು. ಉಪಸಭಾಪತಿ ಸ್ಥಾನಕ್ಕಾಗಿ ಆಡಳಿತ ಪಕ್ಷದ ಬಹುಮತವಿದ್ದ ಕಾರಣ ಹಾಗೂ ವಿರೋಧ ಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸದ ಕಾರಣ ಉಮಾಶ್ರೀ ಅವರಿಗೆ ಉಪಸಭಾಪತಿಯಾಗಿ ಅಧಿಕೃತವಾಗಿ ಘೋಷಿಸಲಾಯಿತು.

ನಾಮಪತ್ರ ಸಲ್ಲಿಸುವ ವೇಳೆ ಉಮಾಶ್ರೀ ಅವರು ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೇಲ್ಮನೆ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಕೆಪಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದರು.

ರಂಗಭೂಮಿ, ಚಲನಚಿತ್ರ, ಕಿರುತೆರೆ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ 5 ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಉಮಾಶ್ರೀ ಅವರು ಕನ್ನಡದ ಪ್ರಮುಖ ಕಲಾವಿದೆ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಅವರ ವಿಧಾನ ಪರಿಷತ್ ಸದಸ್ಯರಾಗಿದ್ದು, ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಹಾಗೂ ಶಾಸಕರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.

----------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande