
ಬಳ್ಳಾರಿ, 18 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೊಸಪೇಟೆಯ ಎಂ.ಪಿ. ಪ್ರಕಾಶ ನಗರದ ಸಾಯಿ ಕಾಲೋನಿ ನಿವಾಸಿಯಾದ ಕೆ.ಎಂ. ನಾಗಬಸಯ್ಯ ಎನ್ನುವ 43 ವರ್ಷದ ವ್ಯಕ್ತಿಯು ಆ.05 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಉಪ ನಿರೀಕ್ಷಕರು ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಅಗಲವಾದ ಅಣೆ, ಬಲವಾದ ಮೈಕಟ್ಟು ಹೊಂದಿದ್ದು, ಬಲಗಡೆ ಮೂಗಿನ ಪಕ್ಕದಲ್ಲಿ ಸಣ್ಣ ಮಚ್ಚೆ ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಗ್ರೇ ಬಣದ ಆಫ್ ಟಿ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ ಹಾಗೂ ನೀಲಿ ಬಣ್ಣದ ಕೈ ಗಡಿಯಾರ ಕಟ್ಟಿರುತ್ತಾನೆ. ಕನ್ನಡ ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ಪಿಎಸ್ ಮೊ.948082131 ಅಥವಾ ಬೆಂಗಳೂರು ರೈಲ್ವೇ ಕಂಟ್ರೋಲ್ ರೂಂ ಮೊ.9480802140 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್