
ನವದೆಹಲಿ, 18 ಆಗಸ್ಟ್ (ಹಿ.ಸ.):
ಆ್ಯಂಕರ್:
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಸೋಮವಾರ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ಏಮ್ಸ್ ಮಂಗಳವಾರ ಬಿಡುಗಡೆ ಮಾಡಿರುವ ವೈದ್ಯಕೀಯ ಬುಲೆಟಿನ್ ಪ್ರಕಾರ, ಆ. 17ರಂದು ಆಂಜಿಯೋಪ್ಲಾಸ್ಟಿ ಬಳಿಕ ನಡ್ಡಾ ಅವರನ್ನು ಏಮ್ಸ್‌ನ ಹೃದ್ರೋಗ ವಿಭಾಗದಲ್ಲಿ ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿರಂತರವಾಗಿ ನಿಗಾ ವಹಿಸಿದೆ.
ಆ. 13ರಂದು ಸಂಜೆ ಅಸ್ವಸ್ಥತೆ ಹಾಗೂ ಎದೆನೋವಿನಂತಹ ಅಸಹಜತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಡ್ಡಾ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಬಳಿಕ ಅವರಿಗೆ ಕೊರೊನರಿ ಆಂಜಿಯೋಗ್ರಫಿ ನಡೆಸಲಾಗಿತ್ತು. ಸದ್ಯ ಹೃದ್ರೋಗ ತಜ್ಞರ ಮೇಲ್ವಿಚಾರಣೆಯಲ್ಲಿರುವ ಅವರ ಆರೋಗ್ಯ ಸ್ಥಿರವಾಗಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.