ಬೆಂಗಳೂರು ಉತ್ತರ ವಿವಿಯಿಂದ ಕೋಲಾರದಲ್ಲಿ ರಾಷ್ಟಿಯ ಬಾಹ್ಯಾಕಾಶ ದಿನ
ಬೆಂಗಳೂರು ಉತ್ತರ ವಿವಿಯಿಂದ ಕೋಲಾರದಲ್ಲಿ ರಾಷ್ಟಿಯ ಬಾಹ್ಯಾಕಾಶ ದಿನ
ಬೆಂಗಳೂರು ಉತ್ತರ ವಿವಿಯಿಂದ ಕೋಲಾರದಲ್ಲಿ ರಾಷ್ಟಿಯ ಬಾಹ್ಯಾಕಾಶ ದಿನ


ಕೋಲಾರ, ೧೮ ಆಗಸ್ಟ್ (ಹಿ.ಸ.)

ಆ್ಯಂಕರ್ : ನಗರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವತಿಯಿಂದ ಹಾಗೂ ಲ್ಯಾಬರೇಟರಿ ಫಾರ್ ಎಲೆಕ್ಟೊçà ಆಪ್ಟಿಕ್ಸ್ ಸಿಸ್ಟಮ್ಸ್ ಮತ್ತು ಎನ್ಎಸ್ಐಎಲ್ ಸಹಯೋಗದಲ್ಲಿ ರಾಷ್ಟಿಯ ಬಾಹ್ಯಾಕಾಶದಿನ-೨೦೨೬ ಕಾರ್ಯಕ್ರಮವನ್ನು ಆ.೧೯ ರ ಬುಧವಾರ ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೂ ಕೋಲಾರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಆಯೋಜಿಸಲಾಗಿದೆ ಎಂದು ವಿವಿಯ ಪ್ರಕಟಣೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಭಾರತದ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳನ್ನು ಸ್ಮರಿಸುವ ಹಾಗೂ ಯುವಜನರಲ್ಲಿ ಬಾಹ್ಯಾಕಾಶ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ `ರಾಷ್ಟಿçÃಯ ಬಾಹ್ಯಾಕಾಶ ದಿನ-೨೦೨೬ ಕಾರ್ಯಕ್ರಮ ನಡೆಸುತ್ತಿದೆ. ಭಾರತದ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳನ್ನು ಸ್ಮರಿಸುವ ಹಾಗೂ ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿ ಬಾಹ್ಯಾಕಾಶ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಇಸ್ರೋ, ಬೆಂಗಳೂರಿನ ಲ್ಯಾಬರೇಟರಿ ಫಾರ್ ಎಲೆಕ್ಟೊ ಆಪ್ಟಿಕ್ಸ್ ಸಿಸ್ಟಮ್ಸ್ ಮತ್ತು ಎನ್ಎಸ್ಐಎಲ್ನ ನಿರ್ದೇಶಕರಾದ ಆರ್. ವೆಂಕಟೇಶ್ವರನ್ ಉದ್ಘಾಟಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ಕೆ. ಸಿದ್ದಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬ0ಧಿಸಿದ0ತೆ ತಜ್ಞರಿಂದ ಉಪನ್ಯಾಸಗಳು ನಡೆಯಲಿವೆ. ಇಸ್ರೋ ಕೇಂದ್ರ ಕಚೇರಿಯ ಕಾರ್ಯಕ್ರಮ ನಿರ್ದೇಶಕ ಅನುರೂಪ್ ಎಂ.ಎಸ್. ಹಾಗೂ ಎಲ್ಇಒಎಸ್ನ ಗ್ರೂಪ್ ಹೆಡ್ ಎಂ.ಎನ್. ಶ್ರೀನಿವಾಸ್ ಅತಿಥಿ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ಬಾಹ್ಯಾಕಾಶ ವಿಜ್ಞಾನಕ್ಕೆ ಸಂಬAಧಿಸಿದ ವಿಡಿಯೋ ಪ್ರದರ್ಶನ ಹಾಗೂ ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ವಿವಿಧ ಶೈಕ್ಷಣಿಕ ಮತ್ತು ಅರಿವು ಮೂಡಿಸುವ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ವಿಜೇತರಿಗೆ ಬಹುಮಾನ ವಿತರಣೆ ಕೂಡ ನಡೆಯಲಿದೆ.

ಭಾರತವು ಬಾಹ್ಯಾಕಾಶ ಸಂಶೋಧನೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧಿಸಿರುವ ಮಹತ್ವದ ಪ್ರಗತಿ, ಚಂದ್ರಯಾನ ಸೇರಿದಂತೆ ವಿವಿಧ ಬಾಹ್ಯಾಕಾಶ ಯೋಜನೆಗಳು ಹಾಗೂ ದೇಶದ ಭವಿಷ್ಯದ ಬಾಹ್ಯಾಕಾಶ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಕೋರಿದೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande