ಶ್ರೀ ಕೃಷ್ಣ ಜಯಂತಿ : ಅದ್ದೂರಿ ಆಚರಣೆ : ಎಡಿಸಿ ಸಿದ್ರಾಮೇಶ್ವರ
ಕೊಪ್ಪಳ, 18 ಆಗಸ್ಟ್ (ಹಿ.ಸ.) ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 4 ರಂದು ಆಚರಿಸಲಾಗುವ ಶ್ರೀ ಕೃಷ್ಣ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಜಿಲ್ಲಾಡಳಿತದಿಂದ ಸ
ಶ್ರೀ ಕೃಷ್ಣ ಜಯಂತಿ : ಅದ್ದೂರಿ ಆಚರಣೆ : ಎಡಿಸಿ ಸಿದ್ರಾಮೇಶ್ವರ


ಶ್ರೀ ಕೃಷ್ಣ ಜಯಂತಿ : ಅದ್ದೂರಿ ಆಚರಣೆ : ಎಡಿಸಿ ಸಿದ್ರಾಮೇಶ್ವರ


ಕೊಪ್ಪಳ, 18 ಆಗಸ್ಟ್ (ಹಿ.ಸ.)

ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 4 ರಂದು ಆಚರಿಸಲಾಗುವ ಶ್ರೀ ಕೃಷ್ಣ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಜಿಲ್ಲಾಡಳಿತದಿಂದ ಸೆಪ್ಟೆಂಬರ್ 4 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಚರ್ಚಿಸಲು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಆದೇಶದಂತೆ ಸೆಪ್ಟೆಂಬರ್ 4 ರಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಅಧೀನ ಕಚೇರಿಗಳಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶ್ರೀ ಶಿರಸಪ್ಪಯ್ಯನ ಮಠದಿಂದ ಗಡಿಯಾರ ಕಂಬ, ಜವಾಹರ ರಸ್ತೆ ಮಾರ್ಗವಾಗಿ ಶ್ರೀ ಕೃಷ್ಣ ದೇವಸ್ಥಾನದವರೆಗೆ ಶ್ರೀ ಕೃಷ್ಣರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಅದ್ಧೂರಿಯಾಗಿ ನಡೆಯಲಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಮೆರವಣಿಗೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ವಸತಿ ಶಾಲೆಗಳು ಹಾಗೂ ಗ್ರಾಮ ಪಂಚಾಯತಿಗಳಲ್ಲಿಯೂ ಶ್ರೀ ಕೃಷ್ಣ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ಅವರು ಸೂಚನೆ ನೀಡಿದರು.

ಮೆರವಣಿಗೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಸಂಚಾರ ಪೊಲೀಸ್ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಕಲ್ಪಿಸಬೇಕು. ನಗರಸಭೆ ವತಿಯಿಂದ ಶ್ರೀ ಕೃಷ್ಣ ಅವರ ಭಾವಚಿತ್ರವನ್ನು ಹೂವಿನಿಂದ ಅಲಂಕರಿಸುವುದು, ಸಾರೋಟನ್ನು ಶೃಂಗರಿಸುವುದು ಹಾಗೂ ಭಾವಚಿತ್ರ ಮತ್ತು ಸಾರೋಟಿಗೆ ಹೂವಿನ ಹಾರದ ವ್ಯವಸ್ಥೆ ಮಾಡಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾವಿದರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಮತ್ತು ಮೆರವಣಿಗೆ ಸಾಗುವ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸಮಾಜದ ಮುಖಂಡರು ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಶ್ರೀ ಕೃಷ್ಣರ ಜಯಂತಿಯನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಚರಿಸಬೇಕು. ಇದಕ್ಕೆ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ, ಸಮಾಜದ ಮುಖಂಡರಾದ ಕುರುಗೋಡ ರವಿ ಯಾದವ, ಜಗನ್ನಾಥ ಯಾದವ, ಯಮನೂರಪ್ಪ, ಚಂದ್ರಶೇಖರ ಅಡವಿಬಾವಿ, ಹುಲುಗಪ್ಪ ವಾಲಿಕಾರ, ಶಿವಪ್ಪ ಮಿರ್ಜಿ ಸೇರಿದಂತೆ ಸಮಾಜದ ಇತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande