ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ: ವಿಜಯೇಂದ್ರ
ಬೆಂಗಳೂರು, 18 ಆಗಸ್ಟ್ (ಹಿ.ಸ.): ಆ್ಯಂಕರ್:ಶಕ್ತಿ ಯೋಜನೆಯಿಂದ ರಾಜ್ಯದ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದಿಂದ ಬರಬೇಕಿರುವ ನಷ್ಟ ಪರಿಹಾರದ ₹5,416.76 ಕೋಟಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್
ವಿಜಯೇಂದ್ರ ಮುಖ್ಯಮಂತ್ರಿಗೆ ಬರೆದಿರುವ ಪತ್ರ


ಬೆಂಗಳೂರು, 18 ಆಗಸ್ಟ್ (ಹಿ.ಸ.):

ಆ್ಯಂಕರ್:ಶಕ್ತಿ ಯೋಜನೆಯಿಂದ ರಾಜ್ಯದ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದಿಂದ ಬರಬೇಕಿರುವ ನಷ್ಟ ಪರಿಹಾರದ ₹5,416.76 ಕೋಟಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಶಕ್ತಿ ಯೋಜನೆ ಜಾರಿಯಿಂದ ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆದಾಯ ನಷ್ಟವನ್ನು ಸರ್ಕಾರವೇ ಭರಿಸುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ. ನಷ್ಟ ಪರಿಹಾರ ಬಾಕಿ ಉಳಿದಿರುವುದರಿಂದ ನೌಕರರ ಭವಿಷ್ಯ ನಿಧಿ ವಂತಿಕೆ, ವಿವಿಧ ಭತ್ಯೆಗಳು ಹಾಗೂ ಬಸ್‌ಗಳ ನಿರ್ವಹಣೆಗೆ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.

ಆದಾಯ ನಷ್ಟ ಸರಿದೂಗಿಸಲು ಅರ್ಧಕ್ಕಿಂತ ಹೆಚ್ಚು ಸಂಚಾರಗಳನ್ನು ರದ್ದುಪಡಿಸಲಾಗಿದ್ದು, ಇದರಿಂದ ಸರ್ಕಾರಿ ಬಸ್‌ಗಳನ್ನು ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೆಲವು ಕಡೆ ವಿದ್ಯಾರ್ಥಿಗಳು ಸರಕು ಸಾಗಣೆ ವಾಹನಗಳನ್ನು ಅವಲಂಬಿಸಿ ಶಾಲಾ-ಕಾಲೇಜುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬಸ್‌ಗಳಿಗೆ ಅಗತ್ಯ ಬಿಡಿಭಾಗಗಳ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಮಾರ್ಗಮಧ್ಯೆ ಬಸ್‌ಗಳು ಕೆಟ್ಟು ನಿಲ್ಲುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ಪ್ರಯಾಣಿಕರ ಸುರಕ್ಷತೆಗೂ ಅಪಾಯ ಎದುರಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿ, ಪುರುಷರ ಪ್ರಯಾಣ ದರವನ್ನು ಹೆಚ್ಚಿಸಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಂಡಂತಾಗಿದೆ ಎಂದು ಟೀಕಿಸಿರುವ ವಿಜಯೇಂದ್ರ, ಸರ್ಕಾರಿ ಸಾರಿಗೆ ವ್ಯವಸ್ಥೆ ಮುಖ್ಯವಾಗಿ ಬಡವರು ಮತ್ತು ಮಧ್ಯಮ ವರ್ಗದವರನ್ನು ಅವಲಂಬಿಸಿರುವ ಸೇವೆಯಾಗಿದ್ದು, ಅದನ್ನು ರಾಜಕೀಯ ಸ್ವಾರ್ಥಕ್ಕಾಗಿ ಹಾಳು ಮಾಡಬಾರದು ಎಂದು ಹೇಳಿದ್ದಾರೆ.

ಶಕ್ತಿ ಯೋಜನೆಯಡಿ ಸರ್ಕಾರದಿಂದ ಬರಬೇಕಿರುವ ನಷ್ಟ ಪರಿಹಾರವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಿ, ಸಾರಿಗೆ ಸಂಸ್ಥೆಗಳು, ನೌಕರರು ಹಾಗೂ ಕೋಟ್ಯಂತರ ಪ್ರಯಾಣಿಕರ ಹಿತ ಕಾಪಾಡಬೇಕು ಎಂದು ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande