ಸಚಿವ ನಾಗೇಂದ್ರ ರಾಜೀನಾಮೆಗೆ ನಾರಾಯಣಸಾ ಭಾಂಡಗೆ ಆಗ್ರಹ
ಬಾಗಲಕೋಟೆ, 18 ಆಗಸ್ಟ್ (ಹಿ.ಸ.) ಆ್ಯಂಕರ್ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿರುವ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಈ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಬಾ
ಆಗ್ರಹ


ಬಾಗಲಕೋಟೆ, 18 ಆಗಸ್ಟ್ (ಹಿ.ಸ.)

ಆ್ಯಂಕರ್ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿರುವ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಈ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಾಗಲಕೋಟೆ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಣವನ್ನು ಬಡವರು, ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಬಳಸಬೇಕಾಗಿತ್ತು. ಆದರೆ ನಿಗಮದ ಹಣದ ದುರ್ಬಳಕೆಯ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣ ರಾಜ್ಯದ ಜನರಲ್ಲಿ ಆತಂಕ ಹಾಗೂ ಆಕ್ರೋಶ ಮೂಡಿಸಿದೆ ಎಂದು ಹೇಳಿದರು.

ಬಡವರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಹಣವನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಗಳಿಗೆ ಬಳಸಬಾರದು. ಸಾರ್ವಜನಿಕರ ತೆರಿಗೆ ಹಣ ಮತ್ತು ಸರ್ಕಾರದ ಕಲ್ಯಾಣ ಯೋಜನೆಗಳ ಹಣದ ದುರ್ಬಳಕೆಯಾಗಿದ್ದರೆ, ಅದಕ್ಕೆ ಸಂಬಂಧಿಸಿದ ಪ್ರತಿಯೊಬ್ಬರ ವಿರುದ್ಧವೂ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ವಾಲ್ಮೀಕಿ ನಿಗಮದ ಹಣದ ವ್ಯವಹಾರಗಳ ಕುರಿತು ಸಂಪೂರ್ಣ ತನಿಖೆ ನಡೆಸಿ, ಹಣದ ವರ್ಗಾವಣೆ, ದುರ್ಬಳಕೆ ಹಾಗೂ ಅಕ್ರಮಕ್ಕೆ ಕಾರಣರಾದವರನ್ನು ಪತ್ತೆಹಚ್ಚಬೇಕು. ಪ್ರಕರಣದಲ್ಲಿ ಸಚಿವರ ಹೊಣೆಗಾರಿಕೆ ಇದ್ದರೆ, ಅವರು ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ನಾರಾಯಣಸಾ ಭಾಂಡಗೆ ವಾಗ್ದಾಳಿ ನಡೆಸಿದರು.

ಸರ್ಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕರಿಗೆ ಸತ್ಯಾಂಶವನ್ನು ಬಹಿರಂಗಪಡಿಸಬೇಕು. ನಿಗಮದ ಹಣವನ್ನು ಕಳೆದುಕೊಂಡಿದ್ದರೆ ಅದನ್ನು ವಾಪಸ್ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ಮುಂದೆ ಸಮಾನವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ನಿಗಮದ ಹಣದ ದುರ್ಬಳಕೆ ಆರೋಪವು ಕೇವಲ ಒಂದು ಇಲಾಖೆಗೆ ಸೀಮಿತವಾದ ವಿಚಾರವಲ್ಲ. ಇದು ಬಡವರು ಮತ್ತು ಪರಿಶಿಷ್ಟ ಪಂಗಡದ ಜನರ ಹಕ್ಕುಗಳಿಗೆ ಸಂಬಂಧಿಸಿದ ವಿಷಯವಾಗಿದೆ. ಆದ್ದರಿಂದ ಪ್ರಕರಣದ ಕುರಿತು ಸರ್ಕಾರವು ಪಾರದರ್ಶಕವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಅವರು ಹೇಳಿದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande