ವಿಜಯಪುರ:ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ ಧರಣಿ
ವಿಜಯಪುರ, 19 ಆಗಸ್ಟ್ (ಹಿ.ಸ.) ಆ್ಯಂಕರ್ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು
ಧರಣಿ


ವಿಜಯಪುರ, 19 ಆಗಸ್ಟ್ (ಹಿ.ಸ.)

ಆ್ಯಂಕರ್ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರಿಯಿತು.

ಧರಣಿಯ ಎರಡನೇ ದಿನವಾದ ಇಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ನಿಗಮದ ಹಣದ ದುರ್ಬಳಕೆ ಪ್ರಕರಣದಲ್ಲಿ ಹೊಣೆಗಾರಿಕೆ ನಿಗದಿಪಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ಕಲ್ಪಿಸುವುದರ ಜೊತೆಗೆ ರೈತರ ಸಾಲ ಮನ್ನಾ ಮಾಡಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯ ನೆರವು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ರೈತರ ಹಿತದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.

ಅಹೋರಾತ್ರಿ ಧರಣಿಯಲ್ಲಿ ಸಂಸದ ರಮೇಶ್ ಜಿಗಜಿಣಗಿ ಸೇರಿದಂತೆ ಪಕ್ಷದ ಹಲವು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಸರ್ಕಾರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ವಾಲ್ಮೀಕಿ ನಿಗಮದ ಹಣದ ಅವ್ಯವಹಾರ ಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆಸಿ ಸಾರ್ವಜನಿಕರ ಹಣದ ದುರ್ಬಳಕೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರೈತರು ಹಾಗೂ ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ವಿಜಯಪುರ ಜಿಲ್ಲೆಯ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande