
ಬೆಂಗಳೂರು, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಮೀಸಲಾದ ಆಸನಗಳ ಅತಿಕ್ರಮಣ ಹೆಚ್ಚಾಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ‘ಮಹಿಳಾ ಆಸನ’ ಎಂಬ ನಾಮಫಲಕವಿದ್ದರೂ, ವಾಸ್ತವದಲ್ಲಿ ಹಲವು ಬಸ್‌ಗಳಲ್ಲಿ ಆ ಆಸನಗಳಲ್ಲಿ ಪುರುಷರು ಕುಳಿತುಕೊಳ್ಳುತ್ತಿರುವುದರಿಂದ ಮಹಿಳಾ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ಮುಂಜಾನೆ ಹಾಗೂ ಸಂಜೆ ಕಚೇರಿ ಸಮಯದಲ್ಲಿ ಜನದಟ್ಟಣೆಯಿಂದ ಕೂಡಿರುವ ಬಸ್‌ಗಳಲ್ಲಿ ಮಹಿಳೆಯರಿಗೆ ಆಸನ ಸಿಗದೆ ನಿಂತೇ ಪ್ರಯಾಣಿಸುವ ಪರಿಸ್ಥಿತಿ ಸಾಮಾನ್ಯವಾಗಿದೆ. ನಿಯಮದಂತೆ ಮಹಿಳೆಯರಿಗೆ ಮೀಸಲಾದ ಆಸನಗಳಲ್ಲಿ ಪುರುಷರು ಕುಳಿತಿದ್ದರೂ, ಬಿಎಂಟಿಸಿ ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ದೂರುಗಳಿವೆ.
ಮಹಿಳಾ ಪ್ರಯಾಣಿಕರು ಆಸನ ಬಿಟ್ಟುಕೊಡುವಂತೆ ಮನವಿ ಮಾಡಿದಾಗ ಕೆಲ ಸಂದರ್ಭಗಳಲ್ಲಿ ಅಸಭ್ಯ ವರ್ತನೆ ಎದುರಿಸಬೇಕಾಗುತ್ತದೆ ಎಂಬ ಆರೋಪವೂ ಕೇಳಿಬರುತ್ತಿದೆ. ಜನದಟ್ಟಣೆಯ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.
ಮಹಿಳಾ ಮೀಸಲು ಆಸನಗಳ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬಿಎಂಟಿಸಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕೇವಲ ನಿಯಮಗಳನ್ನು ಪ್ರಕಟಿಸುವುದಕ್ಕೆ ಸೀಮಿತವಾಗದೆ, ಅವುಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಪ್ರಯಾಣಿಕೆ ಭಾರ್ಗವಿ ಆಗ್ರಹಿಸಿದ್ದಾರೆ.
----------------
ಹಿಂದೂಸ್ತಾನ್ ಸಮಾಚಾರ್ / BHARGAVI G R