10 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೇಂದ್ರ ಸಚಿವಾಲಯದ ಉಪ ಲೆಕ್ಕ ನಿಯಂತ್ರಕ ಸಿಬಿಐ ಬಲೆಗೆ
ನವದೆಹಲಿ, 19 ಆಗಸ್ಟ್ (ಹಿ.ಸ.): ಆ್ಯಂಕರ್: ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಸ್ವತಂತ್ರ ಹಣಕಾಸು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಉಪ ಲೆಕ್ಕ ನಿಯಂತ್ರಕ ಸಂದೀಪ್ ಅವರನ್ನು 10 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಖಾಸಗಿ ಕಂಪನಿಯೊಂದರ ಗು
सीबीआई


ನವದೆಹಲಿ, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಸ್ವತಂತ್ರ ಹಣಕಾಸು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಉಪ ಲೆಕ್ಕ ನಿಯಂತ್ರಕ ಸಂದೀಪ್ ಅವರನ್ನು 10 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ಖಾಸಗಿ ಕಂಪನಿಯೊಂದರ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದ ಕಡತವನ್ನು ತ್ವರಿತವಾಗಿ ವಿಲೇವಾರಿ ಮಾಡಲು ಆರೋಪಿ ಮೊದಲು 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಮಾತುಕತೆಯ ನಂತರ 10 ಲಕ್ಷ ರೂ. ಸ್ವೀಕರಿಸಲು ಒಪ್ಪಿಕೊಂಡಿದ್ದ ಎಂದು ಸಿಬಿಐ ತಿಳಿಸಿದೆ.

ಸಂದೀಪ್ ವಿರುದ್ಧ ಮಂಗಳವಾರ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು. ಗುತ್ತಿಗೆ ನವೀಕರಣದ ಕಡತ ಅವರ ಬಳಿಯೇ ಬಾಕಿ ಉಳಿದಿದ್ದು, ಅದನ್ನು ಶೀಘ್ರ ವಿಲೇವಾರಿ ಮಾಡಲು ಲಂಚ ಕೇಳಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ದೂರು ಆಧರಿಸಿ ಸಿಬಿಐ ಅಧಿಕಾರಿಗಳು ಬಲೆ ಬೀಸಿದ್ದು, ಆರೋಪಿಯ ಪತ್ನಿಯ ಮೂಲಕ 10 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಸಂದೀಪ್ ಅವರನ್ನು ಹಿಡಿದಿದ್ದಾರೆ. ಅವರನ್ನು ವಶಕ್ಕೆ ಪಡೆದುಕೊಂಡಿರುವ ಸಿಬಿಐ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande