ಬಿ.ಸಿ. ನಾಗೇಶ್ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ನಮನ
ಬೆಂಗಳೂರು, 19 ಆಗಸ್ಟ್ (ಹಿ.ಸ.): ಆ್ಯಂಕರ್: ಮಾಜಿ ಸಚಿವರು ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ. ನಾಗೇಶ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರವ ನಮನ ಸಲ್ಲಿಸಿದರು. ಬಿ.ಸಿ. ನಾಗೇಶ್‌ ಅವರು ಹಲವು ವರ್ಷಗಳಿಂದ ಪರಿಚಿತರಾಗಿದ
ಬಿ.ಸಿ. ನಾಗೇಶ್ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ನಮನ


ಬೆಂಗಳೂರು, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಮಾಜಿ ಸಚಿವರು ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ. ನಾಗೇಶ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರವ ನಮನ ಸಲ್ಲಿಸಿದರು.

ಬಿ.ಸಿ. ನಾಗೇಶ್‌ ಅವರು ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಸರಳ, ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದರು. ಶಿಕ್ಷಣ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ತರಲು ಮಹತ್ವದ ಪ್ರಯತ್ನ ನಡೆಸಿದ್ದರು ಎಂದು ಮುಖ್ಯಮಂತ್ರಿ ಸ್ಮರಿಸಿದರು.

ನಾಗೇಶ್‌ ಅವರ ಅಂತ್ಯಕ್ರಿಯೆಗೆ ಎಲ್ಲ ರೀತಿಯ ಸರ್ಕಾರಿ ಗೌರವಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ ಅವರು, ನೊಣವಿನಕೆರೆ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ನಾಗೇಶ್‌ ಅವರು ತಮ್ಮೊಂದಿಗೆ ಪಾಲ್ಗೊಂಡು ಸಹಕರಿಸುತ್ತಿದ್ದರು ಎಂದರು.

ಈ ದುಃಖದ ಸಂದರ್ಭದಲ್ಲಿ ಕುಟುಂಬಸ್ಥರು ಧೈರ್ಯ ಕಳೆದುಕೊಳ್ಳಬಾರದು. ಬಿ.ಸಿ. ನಾಗೇಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರು, ಬಂಧುಗಳು ಮತ್ತು ಅನುಯಾಯಿಗಳಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande