ಗದಗದಲ್ಲಿ ನೇರ ಉದ್ಯೋಗ ಸಂದರ್ಶನ
ಗದಗ, 19 ಆಗಸ್ಟ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗದಗ ವತಿಯಿಂದ ಆಗಸ್ಟ್ 21ರಂದು ಬೆಳಗ್ಗೆ 10 ಗಂಟೆಗೆ ನೇರ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ. ಗದಗ ನಗರದ ಮುಂಡರಗಿ ರಸ್ತೆಯಲ್ಲಿರುವ ಜಗದ್ಗುರು ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು ಎದುರುಗಡೆಯ ಅನ್ನಪೂರ್ಣ ಫೈನಾನ್ಸ್ ಪ್ರೈವ
ಫೋಟೋ


ಗದಗ, 19 ಆಗಸ್ಟ್ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗದಗ ವತಿಯಿಂದ ಆಗಸ್ಟ್ 21ರಂದು ಬೆಳಗ್ಗೆ 10 ಗಂಟೆಗೆ ನೇರ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ.

ಗದಗ ನಗರದ ಮುಂಡರಗಿ ರಸ್ತೆಯಲ್ಲಿರುವ ಜಗದ್ಗುರು ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು ಎದುರುಗಡೆಯ ಅನ್ನಪೂರ್ಣ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ಸಂದರ್ಶನ ನಡೆಯಲಿದೆ.

ಅನ್ನಪೂರ್ಣ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 21ರಿಂದ 30 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಎಕ್ಸಿಕ್ಯೂಟಿವ್, ಸೀನಿಯರ್ ಎಕ್ಸಿಕ್ಯೂಟಿವ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು, ಎರಡು ರೆಸ್ಯೂಮೆ (ಬಯೋಡಾಟಾ) ಪ್ರತಿಗಳು ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದಲ್ಲಿ ಪಾಲ್ಗೊಳ್ಳುವ ಎಲ್ಲ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿದ್ದು, ಸಂದರ್ಶನದ ದಿನದಂದೇ ನೋಂದಣಿ ಮಾಡಿಸಿಕೊಳ್ಳಬೇಕು.

ಯುವನಿಧಿ ಯೋಜನೆಯ ಫಲಾನುಭವಿಗಳು ಈ ನೇರ ಉದ್ಯೋಗ ಸಂದರ್ಶನದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 6363330688, 9901748668 ಹಾಗೂ 6360062240 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande