
ಬಳ್ಳಾರಿ, 19 ಆಗಸ್ಟ್ (ಹಿ.ಸ.)
ಆ್ಯಂಕರ್ : ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ವತಿಯಿಂದ ಸ್ವಯಂ ಉದ್ಯೋಗ ಮತ್ತು ಉದ್ಯಮ ಸ್ಥಾಪಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
18 ರಿಂದ 45 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ತರಬೇತಿಯಲ್ಲಿ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವ್ಯದರ ಕುರಿತಾಗಿ ಮಾಹಿತಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ ಅಥವಾ ಮೊ.9449226221 ಗೆ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ನ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್