ಕೋಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್ ಹೋಟೆಲ್ನಲ್ಲಿ ಅಗ್ನಿ ಅವಘಡ: 9 ಮಂದಿ ಸಾವು
ಕೋಲ್ಕತ್ತಾ, 19 ಆಗಸ್ಟ್ (ಹಿ.ಸ.): ಆ್ಯಂಕರ್: ಕೋಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್ ಪ್ರದೇಶದ ಹೋಟೆಲ್‌ನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬೆಂಕಿ ವೇಗವಾಗಿ ಹರಡಿದ್ದು, ಸುತ್ತಮುತ್ತಲಿನ ಕೆಲ ಹೋಟೆಲ್‌ಗಳಿಗೂ ವ್ಯಾಪಿಸಿದೆ. ದಟ್ಟ ಹೊಗೆಯಿ
कोलकाता के होटल में आग


ಕೋಲ್ಕತ್ತಾ, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಕೋಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್ ಪ್ರದೇಶದ ಹೋಟೆಲ್‌ನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬೆಂಕಿ ವೇಗವಾಗಿ ಹರಡಿದ್ದು, ಸುತ್ತಮುತ್ತಲಿನ ಕೆಲ ಹೋಟೆಲ್‌ಗಳಿಗೂ ವ್ಯಾಪಿಸಿದೆ. ದಟ್ಟ ಹೊಗೆಯಿಂದ ಉಸಿರುಗಟ್ಟಿ ಹಲವರು ಅಸ್ವಸ್ಥರಾಗಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರ ಪ್ರಕಾರ, ರಾತ್ರಿ 2 ಗಂಟೆಗೆ ಕೆಲವೇ ನಿಮಿಷಗಳ ಮುನ್ನ ಹೋಟೆಲ್‌ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಕೊಠಡಿಗಳಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಬೆಂಕಿ ಹೋಟೆಲ್‌ನ ಇತರ ಭಾಗಗಳಿಗೂ ಹರಡಿದೆ. ಹೋಟೆಲ್‌ನಲ್ಲಿ ತಂಗಿದ್ದವರು ಆತಂಕದಿಂದ ಹೊರಬರಲು ಪ್ರಯತ್ನಿಸಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾತ್ರಿ 2.07ಕ್ಕೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ಲಭಿಸಿದೆ. ಕೂಡಲೇ ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ನ್ಯೂ ಮಾರ್ಕೆಟ್ ಠಾಣೆ ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ತಂಡವೂ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತು.

ಹೋಟೆಲ್ ಕಿರಿದಾದ ರಸ್ತೆಯಲ್ಲಿದ್ದ ಕಾರಣ ಅಗ್ನಿಶಾಮಕ ವಾಹನಗಳನ್ನು ಕಟ್ಟಡದ ಸಮೀಪದವರೆಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಹೀಗಾಗಿ ಆರಂಭದಲ್ಲಿ ಹೊರಗಿನಿಂದಲೇ ಬೆಂಕಿ ನಂದಿಸುವ ಕಾರ್ಯ ನಡೆಸಲಾಯಿತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹೋಟೆಲ್ ಒಳಗೆ ಪ್ರವೇಶಿಸಿ ವ್ಯಾಪಕ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ಇಲಾಖೆ ಪ್ರಾಥಮಿಕವಾಗಿ ಶಂಕಿಸಿದೆ. ಆದರೆ, ಬೆಂಕಿಗೆ ನಿಖರ ಕಾರಣ ತನಿಖೆಯ ಬಳಿಕವೇ ತಿಳಿದುಬರಲಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande